ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಮಹಿಳೆ ಸಾವು
1 min readಹುಬ್ಬಳ್ಳಿ: ಸಮೀಪದ ಕುಂದಗೋಳ ಕ್ರಾಸ್ ಬಳಿ ಚಲಿಸುತ್ತಿದ್ದ ಬಸ್ ನಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಮಹಿಳೆಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಡೆದಿದೆ.
ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಶೇಕವ್ವ ಹಿರೇಗೌಡರ್ ಎಂಬ ಮಹಿಳೆಯೇ ಚಲಿಸುತ್ತಿದ್ದ ಬಸ್ ನಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಳು. ತಕ್ಷಣವೇ ಆಕೆಯನ್ನ ಹುಬ್ಬಳ್ಳಿಯ ಕಿಮ್ಸಗೆ ರವಾನೆ ಮಾಡಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.
ತನ್ನೂರು ಅದರಗುಂಚಿಯಿಂದ ಹುಬ್ಬಳ್ಳಿಗೆ ಬರುತ್ತಿದ್ದಾಗ ಬಸ್ ನಿಂದ ಆಯತಪ್ಪಿ ಶೇಕವ್ವ ಹಿರೇಗೌಡರ ಕೆಳಗೆ ಬಿದ್ದಿದ್ದರು. ಘಟನೆಯಲ್ಲಿ ತಲೆಗೆ ಪೆಟ್ಟು ಬಿದ್ದು ತೀವ್ರ ಥರದ ರಕ್ತಸ್ರಾವವಾಗಿತ್ತು.
ಘಟನೆಯ ಬಗ್ಗೆ ಪ್ರಕರಣ ದಾಖಲು ಮಾಡಿಕೊಂಡಿರುವ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.