ಗ್ರಾ.ಪಂ ಚುನಾವಣೆ ಎಣಿಕೆಗೆ ಬರುತ್ತಿದ್ದ ಏಜೆಂಟ್ ಅಪಘಾತದಲ್ಲಿ ಸಾವು

ಹಾವೇರಿ: ಗ್ರಾಮ ಪಂಚಾಯತಿ ಚುನಾವಣೆ ಮತ ಎಣಿಕೆಗಾಗಿ ಹಾವೇರಿಯತ್ತ ಹೊರಟಿದ್ದ ಕಾರು ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಹಾವೇರಿ ತಾಲೂಕಿನ ಬಸವನಕಟ್ಟಿ ಬಳಿ ಸಂಭವಿಸಿದೆ.
ಘಟನೆಯಲ್ಲಿ ಹಾವೇರಿ ತಾಲೂಕಿನ ನೆಗಳೂರು ಗ್ರಾಮದ ಪ್ರಕಾಶ ಬನ್ನಿಮಟ್ಟಿ ಹಾಗೂ ಸಿದ್ಧನಗೌಡ ಬಿಷ್ಟನಗೌಡರ ಮೃತ ದುರ್ದೈವಿಗಳಾಗಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದ ಕಾರ್.
ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು.
ಹಾವೇರಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ಘಟನೆ.
ಪ್ರಕಾಶ ಬನ್ನಿಮಟ್ಟಿ 40 ವರ್ಷ ಮತ್ತು ಸಿದ್ದನಗೌಡ ಬಿಷ್ಟನಗೌಡರ 45 ವರ್ಷ ಮೃತರು.
ಮೃತರು ಹಾವೇರಿ ತಾಲೂಕಿನ ನೆಗಳೂರು ಗ್ರಾಮದ ನಿವಾಸಿಗಳು.
ಗ್ರಾಮ ಪಂಚಾಯ್ತಿ ಮತ ಎಣಿಕೆ ಹಿನ್ನೆಲೆಯಲ್ಲಿ ಹಾವೇರಿಗೆ ಬರುತ್ತಿದ್ದ ಇಬ್ಬರು.
ಅಭ್ಯರ್ಥಿಯ ಪರವಾಗಿ ಮತ ಎಣಿಕೆಯ ಏಜೆಂಟ್ ಆಗಿದ್ದ ಪ್ರಕಾಶ.
ನಿಯಂತ್ರಣ ತಪ್ಪಿ ತುಂಗಾ ಮೇಲ್ದಂಡೆ ಯೋಜನೆಯ ಕಾಲುವೆಗೆ ಕಾರ್ ಉರುಳಿ ಬಿದ್ದಿದ್ದರಿಂದ ದುರ್ಘಟನೆ.
ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.