ಮಹಿಳೆಯೊಂದಿಗೆ ಕಚೇರಿಯಲ್ಲೇ ತಹಶೀಲ್ದಾರ ಕಿಸ್ ಮಿಸ್: ತಹಶೀಲ್ದಾರ ಅಮಾನತ್ತು
1 min readಕೊಪ್ಪಳ: ತಹಶೀಲ್ದಾರ ಕಚೇರಿಯಲ್ಲೇ ತಮ್ಮ ಅಧೀನದ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ನಡೆದುಕೊಂಡ ಘಟನೆಯ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ತಹಶೀಲ್ದಾರ ಕೆ.ಎಂ.ಗುರುಬಸವರಾಜ ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ.
ಕುಷ್ಟಗಿ ತಹಶೀಲ್ದಾರರಾಗಿದ್ದ ಗುರುಬಸವರಾಜ ಅವರ ವಿರುದ್ಧದ ಇಲಾಖಾ ವಿಚಾರಣೆಯನ್ನ ಬಾಕಿಯಿರಿಸಿ ಸೇವೆಯಿಂದ ಅಮಾನತ್ತುಗೊಳಿಸಿ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ನಾಗರಾಜು ಎಸ್.ಆದೇಶ ಹೊರಡಿಸಿದ್ದಾರೆ.
ಕುಷ್ಟಗಿ ತಹಶೀಲ್ದಾರ ಕಚೇರಿಯಲ್ಲಿ ತಹಶೀಲ್ದಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಎಂ.ಗುರುಬಸವರಾಜ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಮಹಿಳಾ ಗ್ರಾಮ ಲೆಕ್ಕಾಧಿಕಾರಿಯ ಜೊತೆ ಅಶ್ಲೀಲವಾಗಿ ನಡೆದುಕೊಂಡ ವೀಡಿಯೋಯೊಂದು ವೈರಲ್ ಆಗಿತ್ತು. ಈ ಬಗ್ಗೆ ಕಾರಣ ಕೇಳಿ ನೋಟೀಸ್ ನೀಡಲಾಗಿತ್ತು.
ಕೆ.ಎಂ.ಗುರುಬಸವರಾಜ ವಿರುದ್ಧ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ದೂರನ್ನ ಮಹಿಳಾ ಸಿಬ್ಬಂದಿ ನೀಡಿದ್ದರು. ಈ ಬಗ್ಗೆ ತನಿಖೆ ನಡೆಸಿ, ತಪ್ಪು ಸಾಬೀತಾಗಿದ್ದರಿಂದ ತಹಶೀಲ್ದಾರ ಅಮಾನತ್ತಾಗಿದ್ದಾರೆ.