ಶಿಕ್ಷಕರ ವರ್ಗಾವಣೆಗೆ ಸಿಎಂ ಅಸ್ತು: ವಾರದಲ್ಲೇ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಹಲವು ದಿನಗಳಿಂದ ಶಿಕ್ಷಕರ ವರ್ಗಾವಣೆ ನಡೆಯಬೇಕೆಂದು ಬಯಸುತ್ತಿದ್ದ ಶಿಕ್ಷಕರಿಗೆ ದಸರಾ ಸಮಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗಿಫ್ಟ್ ನೀಡಿದ್ದು, ವರ್ಗಾವಣೆಗೆ ವೇಳಾಪಟ್ಟಿಯನ್ನ ಪ್ರಕಟಿಸುವಂತೆ ಸೂಚನೆ ನೀಡಿದ್ದಾರೆ.
ರಾಜ್ಯದ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರುಳು ವರ್ಗಾವಣೆ ಸೌಲಭ್ಯವಿಲ್ಲದೇ ಆತಂಕಕ್ಕೆ ಒಳಗಾಗಿದ್ದಾರೆ. ಸರಕಾರ ಮಾರ್ಗಸೂಚಿ ಹೊರಡಿಸಿ 5 ತಿಂಗಳಾದರೂ ವರ್ಗಾವಣೆ ಪ್ರಕ್ರಿಯೆ ವೇಳಾಪಟ್ಟಿಯನ್ನ ಹೊರಡಿಸಿಲ್ಲವೆಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ನೀಡಿದ ಮನವಿಯನ್ನ ಮುಖ್ಯಮಂತ್ರಿ ಉಲ್ಲೇಖ ಮಾಡಿದ್ದಾರೆ.
ಒಂದು ವಾರದ ಒಳಗಾಗಿ ಶಿಕ್ಷಣ ಇಲಾಖೆ ವರ್ಗಾವಣೆ ವೇಳಾಪಟ್ಟಿಯನ್ನ ಪ್ರಕಟಿಸಿ ವರ್ಗಾವಣೆ ಪ್ರಕ್ರಿಯೆ ಆರಂಭಿಸುವಂತೆ ಸಿಎಂ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಈ ಕುರಿತು ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವೂ ಮುಖ್ಯಮಂತ್ರಿಗೆ ಪತ್ರ ಬರೆದು ಮನವಿ ಮಾಡಿದ್ದನ್ನ ಇಲ್ಲಿ ಸ್ಮರಿಸಬಹುದು.