ವಿದ್ಯಾಗಮ ತಾತ್ಕಾಲಿಕ್ ಬಂದ್: ಕಾರಣವೇನು ಗೊತ್ತೆ..?

ರಾಮದುರ್ಗ: ವಿದ್ಯಾಗಮ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೂವತ್ತು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ವಿದ್ಯಾಗಮ ಯೋಜನೆಯನ್ನ ತಾತ್ಕಾಲಿಕವಾಗಿ ನಿಲ್ಲಿಸಿರುವ ಪ್ರಕರಣ ರಾಮದುರ್ಗ ತಾಲೂಕಿನಲ್ಲಿ ನಡೆದಿದೆ.
ವಿದ್ಯಾಗಮ ದ ಮೂಲಕ ಅಕ್ಷರ ಕಲಿಯಲು ತೆರಳಿದ್ದ 30 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದರಿಂದ ಇಲ್ಲಿ ಸೋಮವಾರದಿಂದಲೇ ವಿದ್ಯಾಗಮ ಬಂದ್ ಮಾಡಲಾಗಿದೆ.
ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುದಕವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಸೋಮವಾರ ಎಂ. ತಿಮ್ಮಾಪೂರದಲ್ಲಿ ಕೊರೋನಾ ಪರೀಕ್ಷೆ ನಡೆಸಿದ್ದರು. ಅದರಲ್ಲಿ ಗ್ರಾಮದ ೬ ಜನ ಸೇರಿ ೩೦ ಮಕ್ಕಳಿಗೆ ಕೊರೋನಾ ಪಾಸಿಟಿವ್‌ಪ್ರಕರಣ ದೃಢ ಪಟ್ಟಿದೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಮಾಜ ಮಂದಿರ, ದೇವಸ್ಥಾನ ಸೇರಿದಂತೆ ವಿವಿಧೆಡೆ ವಿದ್ಯಾಗಮದ ಮೂಲಕ ಅಕ್ಷರ ಕಲಿಯುತ್ತಿದ್ದರು. ಮಕ್ಕಳನ್ನು ಸಹಿತ ತಪಾಸಣೆ ಮಾಡಿದಾಗ 190 ವಿದ್ಯಾರ್ಥಿಗಳಲ್ಲಿ 30 ಮಕ್ಕಳಿಗೆ ಸೋಂಕು ದೃಡಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಶಿಕ್ಷಕರ ಗಮನಕ್ಕೆ ತಂದಿದ್ದಾರೆ.
ಕೊರೋನಾ ರೋಗ ಉಲ್ಬಣಗೊಳ್ಳುತ್ತಿದ್ದರೂ ಸರ್ಕಾರದ ಆದೇಶದಂತೆ ಶಿಕ್ಷಕರು ಸಮಾಜ ಮಂದಿರ, ದೇವಸ್ಥಾನಗಳು ಸೇರಿ ಆರು ಕಡೆ ವಿದ್ಯಾಗಮ ಶಿಕ್ಷಣ ನೀಡಲು ಮುಂದಾಗಿದ್ದರು. ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಶಿಕ್ಷಕರನ್ನು ಗ್ರಾಮದಿಂದ ಹೊರ ಹಾಕಿದ್ದಾರೆ. ಶಿಕ್ಷಕರು ಶಾಲೆಗೆ ಮಾತ್ರ ಹೋಗಿ ಬರುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್. ಆಲಾಸೆ ಭೇಟಿ ನೀಡಿ ಪರಿಶೀಲಿಸಿ, ಮಕ್ಕಳಿಗೆ ಕೊರೋನಾ ಸೋಂಕು ದೃಢ ಪಟ್ಟಿದೆ. ಯಾವುದೇ ರೋಗದ ಲಕ್ಷಣಗಳು ಇಲ್ಲ. ಶಿಕ್ಷಕರಿಗೆ ಕೊರೋನಾ ಸೋಂಕು ಇಲ್ಲ ಎಂದು ತಿಳಿಸಿದ್ದಾರೆ. ವರದಿಗಾರರಿಗೆ ತಿಳಿಸಿದರು. ಎಂ. ತಿಮ್ಮಾಪೂರದಲ್ಲಿ ವಿದ್ಯಾಗಮ ವರ್ಗಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಉಳಿದ ವಿದ್ಯಾರ್ಥಿಗಳು ಸೋಂಕು ತಗುಲಿದ ವಿದ್ಯಾರ್ಥಿಗಳ ಪ್ರಾಥಮಿಕ ಸಂಕರ್ಪಕ್ಕೆ ಬಂದಿದ್ದು ಈ ವಿದ್ಯಾರ್ಥಿಗಳ ಪಾಲಕರಲ್ಲಿ ಆತಂಕ ಶುರುವಾಗಿದೆ.