ಡಿಕೆಶಿ ಸಿಬಿಐ ತನಿಖೆ: ಪ್ರತಿಭಟನೆ ಮೂಲಕ ಋಣ ತೀರಿಸುತ್ತಿರುವ ಕುಸುಮಾವತಿ ಶಿವಳ್ಳಿ..!
ಧಾರವಾಡ: ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿಂದು ಶಾಸಕಿ ಕುಸುಮಾವತಿ ಶಿವಳ್ಳಿ, ಡಿ.ಕೆ.ಶಿವುಕುಮಾರ ಅವರ ವಿರುದ್ಧ ಪದೇ ಪದೇ ತನಿಖೆ ನಡೆಯುತ್ತಿದೆ ಎಂದು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿದರು.
ಕುಂದಗೋಳ ನಗರದ ಗಾಳಿ ಮರೆಮ್ಮ ದೇವಸ್ಥಾನದಿಂದ ತಹಶೀಲ್ದಾರ್ ಕಛೇರಿಯವರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮೇಲೆ ಪದೇ ಪದೇ ತನಿಖೆಯನ್ನು ಮಾಡುತ್ತಿರುವುದನ್ನು ಖಂಡಿಸಿ, ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ನೀಡಲಾಯಿತು. ಕುಂದಗೋಳ ಮತಕ್ಷೇತ್ರದ ಕುಂದಗೋಳ ನಗರ/ಕುಂದಗೋಳ ಬ್ಲಾಕ್ ಹಾಗೂ ಛಬ್ಬಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಸದಸ್ಯರು, ಜಿಲ್ಲಾ ಪಂಚಾಯತ ಸದಸ್ಯರು, ತಾಲೂಕು ಪಂಚಾಯತ ಸದಸ್ಯರು ಹಾಗೂ ಕುಂದಗೋಳ ಮತಕ್ಷೇತ್ರದ ಎಲ್ಲ ಮುಂಚೂಣಿ ಘಟಕಗಳ ಅಧ್ಯಕ್ಷರು, ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ವಿಭಾಗಿಯ ಘಟಕಗಳಾದ ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಕಿಸಾನ್ ಕಾಂಗ್ರೆಸ್, ಕಾರ್ಮಿಕ ಕಾಂಗ್ರೆಸ್, ಹಿಂದುಳಿದ ವರ್ಗಗಳ ಕಾಂಗ್ರೆಸ್, ಪರಿಶಿಷ್ಟ ಜಾತಿ ಕಾಂಗ್ರೆಸ್ ಸಮಿತಿ, ಪರಿಶಿಷ್ಟ ವರ್ಗಗಳ ಕಾಂಗ್ರೆಸ್ ಸಮಿತಿ, ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಮಿತಿ, ಸೇವಾದಳ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಕಾಂಗ್ರೆಸ್ ಪಕ್ಷದ ಮುಖಂಡರುಗಳು ಕಾರ್ಯಕರ್ತರು ಅಭಿಮಾನಿಗಳು ಭಾಗವಹಿಸಿದ್ದರು.
ಆಡಳಿತ ಪಕ್ಷ ಉದ್ದೇಶಪೂರ್ವಕವಾಗಿಯೇ ಶಿವುಕುಮಾರ ಮೇಲೆ ತನಿಖಾ ದಾಳಿಗಳನ್ನ ನಡೆಸುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು. ಇಲ್ಲದಿದ್ದರೇ ಹೋರಾಟವನ್ನ ತೀವ್ರಗೊಳಿಸಲಾಗುವುದೆಂದು ಎಚ್ಚರಿಕೆ ನೀಡಲಾಯಿತು.