ಬಿಡಲಾರದ ಮಳೆಗೆ ಬೆಳೆ ನಾಶ- ಯುವ ರೈತ ಆತ್ಮಹತ್ಯೆಗೆ ಶರಣು

ಧಾರವಾಡ: ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರದ ಹಾಗೇ ಬೆಳೆ ಕೈಕೊಟ್ಟಿದ್ದರಿಂದ ಕಂಗಾಲಾದ ರೈತನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸಂಶಿ ಗ್ರಾಮದಲ್ಲಿ ನಡೆದಿದೆ.
ಸಂಶಿ ಗ್ರಾಮದ ಮಂಜುನಾಥ ಪಲ್ಲೇದ ಎಂಬ ಯುವ ರೈತನೇ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ಗ್ರಾಮದಲ್ಲಿರುವ ಬ್ಯಾಂಕ್ ಬರೋಡಾದಲ್ಲಿ ಎರಡು ಲಕ್ಷ ರೂಪಾಯಿ ಸಾಲ ತೆಗೆದುಕೊಂಡಿದ್ದು, ಕಳೆದ ಎರಡ್ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದ ಹಿನ್ನೆಲೆಯಲ್ಲಿ ಮನನೊಂದ ಹೀಗೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮಂಜುನಾಥನ ಪತ್ನಿ ಲಕ್ಷ್ಮೀ ಪಲ್ಲೇದ ಕುಂದಗೋಳ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣವನ್ನ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.