ರಾಜ್ಯಸಭೆ ಸದಸ್ಯ ಅಶೋಕ ಗಸ್ತಿ ಕೊರೋನಾದಿಂದ ಸಾವು- ಗಣ್ಯರ ಸಂತಾಪ
ಬೆಂಗಳೂರು: ಕಳೆದ ನಾಲ್ಕು ತಿಂಗಳ ಹಿಂದಷ್ಟೇ ರಾಜ್ಯಸಭಾ ಸದಸ್ಯರಾಗಿ ಆಯ್ಕೆಗೊಂಡಿದ್ದ ಅಶೋಕ ಗಸ್ತಿ ಕೊರೋನಾ ಪಾಸಿಟಿವ್ ನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವಿಗೀಡಾದ್ದಾರೆ.
ಇಳಿಸಂಜೆಯಷ್ಟೇ ಅಶೋಕ ಗಸ್ತಿ ನಿಧನರಾಗಿದ್ದಾರೆಂಬ ಸುದ್ದಿ ಹಬ್ಬಿತ್ತಾದರೂ, ಇಲ್ಲ, ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಯಿತು. ಈಗಷ್ಟೇ ಅಶೋಕ ಗಸ್ತಿಯವರು ಅಗಲಿರುವುದು ಗೊತ್ತಾಗಿದೆ.
ಸಚಿವ ಪ್ರಲ್ಹಾದ ಜೋಶಿ ಸೇರಿದಂತೆ ಹಲವರು ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ…
ಪ್ರಲ್ಹಾದ ಜೋಶಿ
ಇತ್ತೀಚೆಗಷ್ಟೇ ಬಿಜೆಪಿಯ ರಾಜ್ಯ ಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಶ್ರೀ ಅಶೋಕ್ ಗಸ್ತಿಯವರು ಕೊರೊನ ಸೋಂಕಿನಿಂದ ಮೃತಪಟ್ಟಿದ್ದು ಅತೀ ದುಃಖದ ಸಂಗತಿ.
ವಿದ್ಯಾರ್ಥಿ ದೆಸೆಯಿಂದಲೂ ಎಬಿವಿಪಿ ವಿದ್ಯಾರ್ಥಿ ಮುಖಂಡರಾಗಿದ್ದ ಗಸ್ತಿ, 1989ರಲ್ಲಿ ಯುವ ಮೋರ್ಚಾದ ರಾಯಚೂರು ಜಿಲ್ಲಾಧ್ಯಕ್ಷರಾಗಿದ್ದರು. ಜೂನ್ 19ರಂದು ರಾಜ್ಯಸಭೆ ಸದಸ್ಯರಾಗಿ ಅಶೋಕ ಗಸ್ತಿ ಅವಿರೋಧವಾಗಿ ಆಯ್ಕೆಯಾಗಿದ್ದರು.
ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.