ರಾಜ್ಯದಲ್ಲಿಂದು 9058 ಪಾಸಿಟಿವ್: 5159 ಗುಣಮುಖ- 135 ಸೋಂಕಿತರ ಸಾವು
ರಾಜ್ಯದಲ್ಲಿ ಒಂದೇ ದಿನ ದಾಖಲೆಯ 9058 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಗುಣಮುಖರಾದವರ ಸಂಖ್ಯೆಯಲ್ಲೂ ಇಳಿಮುಖವಾಗಿದೆ. ಇಂದು 5159 ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ 2967 ಪಾಸಿಟಿವ ಪ್ರಕರಣಗಳು ಪತ್ತೆಯಾಗಿದ್ದು, 1137 ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ರಾಜ್ಯದ ಪ್ರತಿ ಜಿಲ್ಲೆಯ ಮಾಹಿತಿ ಇಲ್ಲಿದೆ ನೋಡಿ