ಸುಪ್ರೀಂಕೋರ್ಟ್ ತಡೆಯಾಜ್ಞೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಸಂಬಂಧಿಸಿದ್ದಲ್ವಂತೆ…!
1 min readಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ ಎಂಬ ಸುದ್ದಿ ಎಲ್ಲೆಡೆ ಹರದಾಡುತ್ತಿದ್ದು, ಈ ವಿಷಯದಲ್ಲಿ ಜನಸಾಮಾನ್ಯರು ಗೊಂದಲಕ್ಕೆ ಒಳಗಾಗುವುದು ಬೇಡವೆಂದು ಆಮ್ ಆದ್ಮಿ ಹೇಳಿದೆ.
ಸರ್ವೋಚ್ಚ ನ್ಯಾಯಾಲಯ ಹೊರಡಿಸಿರುವ ತೀರ್ಪು ವಿಜಯಪುರಕ್ಕೆ ಸಂಬಂಧಿಸಿದ ಕರ್ನಾಟಕ ಉಚ್ಚ ನ್ಯಾಯಾಲಯದ 35/2020 ಪ್ರಕರಣದಲ್ಲಿ. ಹು-ಧಾ ಮಹಾನಗರ ಪಾಲಿಕೆ ಚುನಾವಣೆಗೆ 49814/2019 ಕರ್ನಾಟಕ ಉಚ್ಚ ನ್ಯಾಯಾಲಯದ ಪ್ರಕರಣ ಅನ್ವಯವಾಗುವುದು. ಈ ಎರಡು ಪ್ರಕರಣಗಳು ಪ್ರತ್ಯೇಕವಾಗಿದ್ದು, ಸರ್ವೋಚ್ಚ ನ್ಯಾಯಾಲಯ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಗೆ ಹೊರಡಿಸುವ ತಡೆಯಾಜ್ಞೆ ಹು-ಧಾ ಮಹಾನಗರ ಪಾಲಿಕೆಗೆ ಅನ್ವಯಿಸುವುದಿಲ್ಲ.
ಪ್ರಜಾಪ್ರಭುತ್ವದಲ್ಲಿ ಚುನಾವಣೆ ಎಂಬುದು ಪ್ರಮುಖವಾದದ್ದು, ಈ ತರಹದ ವದಂತಿಗಳಿಂದ ಈಗಾಗಲೇ 23 ತಿಂಗಳುಗಳಿಂದ ವಿಳಂಬವಾದ ಹು-ಧಾ ಪಾಲಿಕೆ ಚುನಾವಣೆಯನ್ನ ಇನ್ನಷ್ಟು ಕಾಲಹರಣ ಮಾಡಲು ಸರ್ಕಾರಕ್ಕೆ ಆಸ್ಪದ ಕೊಡಬಾರದೆಂದು ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ.