ಕಲಬುರಗಿಯಲ್ಲಿ ಆಶಾ ಕಾರ್ಯಕರ್ತೆ ಸಾವು: ಕಲ್ಯಾಣ ಕರ್ನಾಟಕದಲ್ಲಿ ಎರಡನೇಯ ಮರಣ

ಕಲಬುರಗಿ: ದ್ವಿಚಕ್ರ ವಾಹನ ಆಯತಪ್ಪಿ ಬಿದ್ದ ಪರಿಣಾಮ ಆಶಾ ಕಾರ್ಯಕರ್ತೆ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಕೆಲ್ಲೂರು ಗ್ರಾಮದ ಬಳಿ ಸಂಭವಿಸಿದೆ.
ಮಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ 12 ವರ್ಷಗಳಿಂದ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಆಶಾ ಕಾರ್ಯಕರ್ತೆ ಶಾರದಾ, ಸಭೆಯ ಹಿನ್ನೆಲೆ ಜೇವರ್ಗಿ THO ಕಚೇರಿಗೆ ಹೋಗಿ ಮರಳುವಾಗ ದುರ್ಘಟನೆ ಸಂಭವಿಸಿದೆ. ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ರು ಕೂಡಾ, ಚಿಕಿತ್ಸೆ ಫಲಿಸದೆ ಸಾವಗೀಡಾಗಿದ್ದಾರೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.