Posts Slider

Karnataka Voice

Latest Kannada News

ಹಿರಿಯ ಸಾಹಿತಿ, ಕಥೆಗಾರ ಅಬ್ಬಾಸ್ ಮೇಲಿನಮನಿ ಇನ್ನಿಲ್ಲ

1 min read
Spread the love

ಬಾಗಲಕೋಟೆ: ನಾಡಿನ ಜನಪ್ರಿಯ ಕಥೆಗಾರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ಬಾಗಲಕೋಟೆಯ ಕಥೆಗಾರ ಅಬ್ಬಾಸ್ ಮೇಲಿನಮನಿ ಅವರು, ಸಮಕಾಲೀನ ಪೀಳಿಗೆಯ ಕಥೆಗಾರರಲ್ಲಿ ಬಹುಮುಖ್ಯವಾದುದು. ಶರಣರು ಮೆಟ್ಟಿದ ನೆಲದಲ್ಲಿರುವ ಅಬ್ಬಾಸ್ ಅವರು, ಮೌಲ್ಯಗಳ ಬಿತ್ತು ಕಾಯಕವನ್ನು ತಮ್ಮ ಸಂವೇದನಶೀಲ ಕಥೆಗಳ ಮೂಲಕ ಮಾಡುತ್ತ್ತಾ ಬಂದಿದ್ದಾರೆ. ಇಂತಹ ವಿಶಿಷ್ಟವಾದ ಸಂವೇದನಶೀಲ ಕಥೆಗಾರ ಅಬ್ಬಾಸ್ ಮೇಲಿನಮನಿ ಇನ್ನಿಲ್ಲವಾಗಿರುವುದು ಕನ್ನಡ ನಾಡಿನ ಸಾಹಿತ್ಯ ಲೋಕದ ನಕ್ಷತ್ರ ಕಳಚಿದಂತಾಗಿದೆ.

ಮೂಲತ: ಬಾಗಲಕೋಟೆಯವರಾದ ಅಬ್ಬಾಸ್ ಮೇಲಿನಮನಿ ಅವರು, 1954 ಮಾರ್ಚ 5ರಂದು ಜನಿಸಿದ್ದಾರೆ. ಪದವಿ ಶಿಕ್ಷಣದವರೆಗಿನ ಬಾಗಲಕೋಟೆಯ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಪಡೆದ ಅವರು, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಸಾಹಿತ್ಯ ಕೃಷಿ: ನೇರ, ನಿಷ್ಠುರತೆಯ ಸ್ವಭಾವ ಹೊಂದಿದ ಅಬ್ಬಾಸ್ ಮೇಲಿನಮನಿ ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶೇಷವಾದ ಹೆಸರು ಗಳಿಸಿದವರು. ಯಾವುದೇ  ಅಗ್ಗದ ಪ್ರಚಾರದ ಹಿಂದೆ ಬೀಳದ ಅವರು, ಇದ್ದದನ್ನು ಇದ್ದ ಹಾಗೇ ನೇರವಾಗಿ  ಹೇಳುವ ಎದೆಗಾರಿಕೆ ಹೊಂದಿದೆ ನಿಷ್ಠುರತೆಯ ಕಥೆಗಾರಾಗಿ ಗುರುತಿಸಿಕೊಂಡು ಸಾಹಿತ್ಯದ ಕೃಷಿಯನ್ನು ಮಾಡಿದ್ದಾರೆ.

ಕಥಾ ಸಂಕಲನಗಳು: ಪ್ರೀತಿಸಿದವರು, ಕಣ್ಣ ಮುಂದಿನ ಕಥೆ, ಅರ್ಧಸತ್ಯಗಳು ಇತ್ಯಾದಿ. ಕವನ ಸಂಕಲನಗಳು: ಕಥೆಯಾದಳು ಹುಡುಗಿ, ಭಾವೈಕ್ಯ ಬಂಧ, ಪ್ರೀತಿ ಬದುಕಿನ ಹಾಡು. ಕಾದಂಬರಿಗಳು: ಜನ್ನತ್ ಮೊಹಲ್ಲ. ಲೇಖನ: ಸೌಹಾರ್ದ ಸಂಸ್ಕೃತಿ, ಸಂಪಾದಿತ: ಸಣ್ಣಕತೆ, ಕ್ಯಾದಗಿ ಪ್ರಜ್ಞೆ ಮುಳುಗದ ಕಥೆಗಳು.

ಪ್ರಶಸ್ತಿ-ಪುರಷ್ಕಾರಗಳು: ಮಂಗಳೂರಿನ ಮಹ್ಯುದ್ದೀನ ಸಾಹಿತ್ಯ ಪ್ರತಿಷ್ಠಾನ ಪ್ರಶಸ್ತಿ, ಶಿವಮೊಗ್ಗ ಕ.ಸ.ಪ. ಲಂಕೇಶ್ ಕಥಾ ಪ್ರಶಸ್ತಿ, ತುಷಾರ ಎಚ್.ಎಂ.ಟಿ. ಅತ್ಯುತ್ತಮ ಕಥಾ ಪ್ರಶಸ್ತಿಗಳು ಲಭಿಸಿವೆ. ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಸದಸ್ಯರಾಗಿದ್ದರು.

ಪ್ರತಿಮೆ, ಆಕೃತಿಗಳನ್ನು ಕಟ್ಟಿಕೊಡುವುದನ್ನು ಇವರು ಕಥೆಗಳ ಮೂಲಕ ಮಾಡಿದ್ದಾರೆ. ಹಿಂದೂ, ಮುಸ್ಲಿಂ ಸಮುದಾಯಗಳ ಸಾಮಾಜಿಕ ಸಂಬಂಧಗಳನ್ನು, ಅದರ ಸಂವೇದನೆಗಳನ್ನು ಅಬ್ಬಾಸ್ ಕಥೆಗಳು ಕಟ್ಟಿಕೊಡುತ್ತವೆ.  ಒಂದು ಸಮಾಂತರದ ನೆಲೆಯಲ್ಲಿ ನಿಂತು ಧ್ಯಾನಸ್ಥನಾಗಿ ಕಾಣುವ ಪರಿ ಅನನ್ಯ.

ಜಿಲ್ಲೆಯ ಪತ್ರಿಕಾ ಕ್ಷೇತ್ರದೊಂದಿಗೆ ಉತ್ತಮವಾದ ಸಂಬಂಧವನ್ನು ಹೊಂದಿದ್ದ ಅವರು, ಬಾಗಲಕೋಟೆ ನಗರದ ಜಿಲ್ಲಾ ಪತ್ರಿಕೆಯೊಂದರಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.


Spread the love

Leave a Reply

Your email address will not be published. Required fields are marked *

You may have missed