ಹೆಬ್ಬಳ್ಳಿಯಲ್ಲೊಂದು-ಹುಬ್ಬಳ್ಳಿಯಲ್ಲೊಂದು ಬೈಕ್ ಅವಘಡ: ಇಬ್ಬರ ದುರ್ಮರಣ
ಧಾರವಾಡ: ಜಿಲ್ಲೆಯ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಬೈಕ್ ಸವಾರರು ಸಾವಿಗೀಡಾದ ಘಟನೆ ನಡೆದಿದ್ದು, ಹುಬ್ಬಳ್ಳಿ ಶಹರದಲ್ಲೊಂದು ನಡೆದರೇ ಮತ್ತೊಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ-ತೀರ್ಲಾಪುರ ರಸ್ತೆಯಲ್ಲಿ ಸಂಭವಿಸಿದೆ.
ಹುಬ್ಬಳ್ಳಿಯಿಂದ ಬಾಗಲಕೋಟೆಗೆ ಹೊರಟಿದ್ದ ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಮಧುರಾ ಕಾಲನಿಯ ಬಳಿ ದುರ್ಘಟನೆ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡಿದ್ದ ಚೆನ್ನಬಸಪ್ಪ ಮಲ್ಲೇಶಪ್ಪ ಮುತುದಾರ ಎಂಬ ಯುವಕನನ್ನ ಕಿಮ್ಸಗೆ ರವಾನೆ ಮಾಡಲಾಯಿತಾದರೂ, ಚಿಕಿತ್ಸೆ ಫಲಿಸದೇ ಯುವಕ ಪ್ರಾಣ ಕಳೆದುಕೊಂಡಿದ್ದಾನೆ.ಈ ಕುರಿತು ಹುಬ್ಬಳ್ಳಿ ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್ ಹಾಗೂ ಬೈಕ್ ವಶಕ್ಕೆ ಪಡೆದು ಕ್ರಮ ಜರುಗಿಸಲಾಗಿದೆ.
ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಹೊರವಲಯದ ತೀರ್ಲಾಪುರಕ್ಕೆ ಹೋಗುವ ರಸ್ತೆಯಲ್ಲಿ ಬೈಕಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಯುವಕನೋರ್ವ ಸಾವಿಗೀಡಾದ ಘಟನೆ ನಡೆದಿದೆ. ಮೃತ ಯುವಕನನ್ನ ಶಹಾನ ಕೊಣ್ಣೂರ ಎಂದು ಗುರುತಿಸಲಾಗಿದ್ದು, ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.