ಕುಂದಗೋಳದ ಬಳಿ ಕಾರು-ಬಸ್ ಡಿಕ್ಕಿ-ಇಬ್ಬರಿಗೆ ಗಂಭೀರ ಗಾಯ
ಧಾರವಾಡ: ಹುಬ್ಬಳ್ಳಿಯಿಂದ ಲಕ್ಷ್ಮೇಶ್ವರಕ್ಕೆ ಹೊರಟಿದ್ದ ಬಸ್ ಗೆ ಹಾಗೂ ಕುಂದಗೋಳದಿಂದ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಕಾರಿನ ಮುಂಭಾಗಕ್ಕೆ ಬಸ್ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರಿಗೆ ತೀವ್ರ ಥರದ ಗಾಯಗಳಾಗಿದ್ದು, ಇಬ್ಬರನ್ನೂ ಕಿಮ್ಸಗೆ ರವಾನೆ ಮಾಡಲಾಗಿದೆ.
ಯರೇಬೂದಿಹಾಳ ಕ್ರಾಸ್ ಬಳಿ ನಡೆದ ಘಟನೆಯಲ್ಲಿ ಗಾಯಗೊಂಡವರ ಬಗ್ಗೆ ಹೆಚ್ಚಿನ ಮಾಹಿತಿ ಬರಬೇಕಿದ್ದು, ಪ್ರಕರಣ ಕುಂದಗೋಳ ಠಾಣೆಯಲ್ಲಿ ದಾಖಲಾಗಿದೆ. ಬಸ್ ಚಾಲಕನಿಂದ ಅಪಘಾತದ ಬಗ್ಗೆ ಮಾಹಿತಿಯನ್ನ ಪಡೆಯಲಾಗುತ್ತಿದೆ.