ಧಾರವಾಡ ಬಾಡದ ಬಳಿ ಕ್ರೂಸರ್ ಅಪಘಾತ: ಸತ್ತವರ ಸಂಖ್ಯೆ 9ಕ್ಕೇರಿಕೆ..

ಧಾರವಾಡ: ಧಾರವಾಡ ತಾಲ್ಲೂಕಿನ ನಿಗದಿ ಗ್ರಾಮದ ಬಳಿಯಲ್ಲಿ ಕ್ರೂಜರ್ ವಾಹನ ಪಲ್ಟಿಯಾದ ಪರಿಣಾಮ ಏಳು ಜನ ಸ್ಥಳದಲ್ಲಿ ಸಾವಿಗೀಡಾಗಿದ್ದು, ಈಗಷ್ಟೇ ಮತ್ತೆ ಇಬ್ಬರು ಮಹಿಳೆಯರು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.
ಮೃತರನ್ನ ಚೆನ್ನವ್ವ ಹಾಗೂ ಮಧುಶ್ರೀ ಎಂದು ಗುರುತಿಸಲಾಗಿದೆ. ಈ ಮೂಲಕ ಸಾವಿಗೀಡಾದವರ ಸಂಖ್ಯೆ 9ಕ್ಕೇರಿದೆ.
ದಾಸನಕೊಪ್ಪ ಕುಟುಂಬದವರ ನಿಶ್ಚಿತಾರ್ಥ ಕಾರ್ಯವನ್ನು ಮನಸೂರು ಗ್ರಾಮದ ರೇವಣಸಿದ್ದೇಶ್ವರ ಮಠದಲ್ಲಿ ಮುಗಿಸಿ ಮರಳಿ ನಿಗದಿ ಗ್ರಾಮಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಕ್ರೂಸರ್ ವಾಹನ ಚಾಲಕ ಅತಿ ಜೋರಾಗಿ ಚಾಲನೆ ಮಾಡುತ್ತಿದ್ದಾಗ ಕ್ರೂಸರ್ ಪಲ್ಟಿಯಾದ ಪರಿಣಾಮ 7 ಜನ ಸ್ಥಳದಲ್ಲೇ ಮೃತಪಟ್ಟಿದ್ದು, ಕಿಮ್ಸನಲ್ಲಿ ಇಬ್ಬರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.
ಗಂಭೀರವಾಗಿ ಗಾಯಗೊಂಡ 13 ಜನರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು, ಇವರಲ್ಲಿ ಮತ್ತೆ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ. ನಾಲ್ಕು ಶವಗಳನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ಕಳಿಸಿ ಮೂರು ಶವಗಳನ್ನು ಹುಬ್ಬಳ್ಳಿಯ ಕೀಮ್ಸ್ ಶವಾಗಾರಕ್ಕೆ ರವಾನಿಸಿದ್ದಾರೆ.