Posts Slider

Karnataka Voice

Latest Kannada News

ಧಾರವಾಡ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯನ ದುರ್ಮರಣ…

Spread the love

ಧಾರವಾಡ: ಭಾರತೀಯ ಜನತಾ ಪಕ್ಷದ ಧಾರವಾಡ ನಗರ ಘಟಕ-71ರ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ರಸ್ತೆ ಅಪಘಾತದಲ್ಲಿ ಇಂದು ಬೆಳಗಿನ ಜಾವ ತಾಲೂಕಿನ ಶಿವಳ್ಳಿ ಗ್ರಾಮದ ಬಳಿ ಸಾವಿಗೀಡಾಗಿದ್ದಾರೆ.

ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ನಡೆದ ಅಪಘಾತದಲ್ಲಿ ಭಾರತೀಯ ಜನತಾ ಪಾರ್ಟಿ ಧಾರವಾಡ ನಗರ ಘಟಕ 71ರ ಯುವ ಮೊರ್ಚಾ ಕಾರ್ಯಕಾರಣಿ ಸದಸ್ಯ ಶ್ರೀಕಾಂತ ಒಂಟಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಯಿತಾದರೂ ಮಾರ್ಗ ಮಧ್ಯೆದಲ್ಲಿಯೇ ಸಾವಿಗೀಡಾಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.

ಕಂಬನಿ.

ಭಾರತೀಯ ಜನತಾ ಪಾರ್ಟಿ ಧಾರವಾಡ ನಗರ ಘಟಕ 71ರ ಯುವ ಮೊರ್ಚಾ ಕಾರ್ಯಕಾರಣಿ ಸದಸ್ಯ ಶ್ರೀಕಾಂತ ಒಂಟಿ ಅವರ ಸಾವಿಗೆ ಶಾಸಕ ಅಮೃತ ದೇಸಾಯಿ ಕಂಬನಿ ಮಿಡಿದಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಕೋರಿರುವ ಶಾಸಕರು, ಅವರ ಕುಟುಂಬಕ್ಕೆ ಧೈರ್ಯವನ್ನ ಹೇಳಿದ್ದಾರೆ.


Spread the love

Leave a Reply

Your email address will not be published. Required fields are marked *