ಕಾರ್‌ಗೆ VRL ಸ್ಟಾಫ್ ಬಸ್ ಡಿಕ್ಕಿ- ಕೂದಲೆಳೆ ಅಂತರದಲ್ಲಿ ಪಾರಾದ ಧಾರವಾಡ ಜಿಲ್ಲಾ BJP ಉಪಾಧ್ಯಕ್ಷ…!!!

ಹುಬ್ಬಳ್ಳಿ: ಕಾರಿಗೆ ವ್ಹಿಆರ್‌ಎಲ್ ಸ್ಟಾಫ್ ಬಸ್ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಕುಸುಗಲ್ ಬಳಿಯ ಇಂಗಳಹಳ್ಳಿ ಕ್ರಾಸ್ ಬಳಿ ನಡೆದಿದ್ದು, 30ಕ್ಕೂ ಹೆಚ್ಚು ಸ್ಟಾಫ್‌ಗಳಿಗೆ ಗಾಯವಾಗಿದ್ದು, ಕಾರಿನಲ್ಲಿದ್ದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಭಾರತೀಯ ಜನತಾ ಪಕ್ಷದ ಧಾರವಾಡ ಜಿಲ್ಲಾ ಉಪಾಧ್ಯಕ್ಷ ಮಲ್ಲಪ್ಪ ಫಕ್ಕೀರಪ್ಪ ಹಳಕಟ್ಟಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಾರು ಬಹುತೇಕ ಜಖಂಗೊಂಡಿದೆ.
ಘಟನೆಯಲ್ಲಿ ಬಸ್ ಪಲ್ಟಿಯಾಗಿದ್ದು, ಹಲವರನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.