ಹುಬ್ಬಳ್ಳಿ; ಅಪಘಾತ- ಮೂರ್ಛೆ ಬಿದ್ದ ಮುದುಕನಿಗೆ ಸ್ಥಳೀಯರೇ ಆಸರೆ
1 min readಹುಬ್ಬಳ್ಳಿ: ಬೈಕಿನಲ್ಲಿ ಹೋಗುತ್ತಿದ್ದ ಸಮಯದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಆಘಾತದಲ್ಲಿ ವೃದ್ಧರೋರ್ವರು ಎರಡು ಗಂಟೆಗೂ ಹೆಚ್ಚು ಕಾಲ ರಸ್ತೆಯಲ್ಲೇ ಮೂರ್ಛೆ ತಪ್ಪಿ ಬಿದ್ದು, ಸ್ಥಳೀಯರ ಸಹಾಯದಿಂದ ಆಸ್ಪತ್ರೆ ಸೇರುವಂತಾಗಿದೆ.
ಹುಬ್ಬಳ್ಳಿಯಿಂದ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮಕ್ಕೆ ಹೊರಟಿದ್ದ ಬಸವರಾಜ ಪಾಟೀಲ ಎಂಬುವವರೇ ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಾಯದಿಂದ ಹುಬ್ಬಳ್ಳಿಯ ಕಿಮ್ಸಗೆ ರವಾನೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ತಮ್ಮದೇ ಬೈಕಿನಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ವಾಹನ ಡಿಕ್ಕಿ ಹೊಡೆದಿದೆ. ಮೊದಲೇ ವಯಸ್ಸು ಆಗಿದ್ದರಿಂದ ಗಾಬರಿಯಾದ ಬಸವರಾಜ ಪಾಟೀಲ, ಅಲ್ಲಿಯೇ ಮೂರ್ಛೆ ಹೋಗಿದ್ದಾರೆ. ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನ ವಾಕಿಂಗ್ ಗೆ ಹೋದವರು ನೋಡಿ, ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಹುಬ್ಬಳ್ಳಿಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಕ್ಕಿ ಮಾಡಿ ಪರಾರಿಯಾಗಿರುವ ವಾಹನದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.