ಅಮ್ಮಿನಬಾವಿ ಬಳಿ ರಸ್ತೆ ಅಪಘಾತ ಮೂರು ಸಾವು

ಧಾರವಾಡ ತಾಲೂಕಿನ ಅಮ್ಮಿನಬಾವಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಿಂದ ಹುಬ್ಬಳ್ಳಿಯತ್ತ ಹೊರಟಿದ್ದ ಕಾರು, ಕಬ್ಬು ತುಂಬಿದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಸಾವಿಗೀಡಾಗಿದ್ದಾರೆ.
ಸವದತ್ತಿ ಪಟ್ಟಣದಲ್ಲಿ ರೇಣುಕಾ ಪೋಟೊ ಸ್ಟುಡಿಯೋ ಹೊಂದಿರುವ ಸಿದ್ದು ಇಚ್ಚಂಗಿ, ಅವರ ತಾಯಿ ಸರೋಜಾ ಹಾಗೂ ಸಿದ್ಧು ಅವರ ಮಡದಿ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ.
ಕಾರು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ಲಾರಿಯೊಳಗೆ ನುಗ್ಗಿದ್ದು, ಕಾರಿನಲ್ಲಿದ್ದವರ ಪೈಕಿ ಒಬ್ಬರು ಮಾತ್ರ ಗಂಭೀರವಾಗಿ ಗಾಯಗೊಂಡಿದ್ದು, ಇನ್ನುಳಿದ ಮೂವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ಗ್ರಾಮೀಣ ಠಾಣೆ ಪೊಲೀಸರು, ಶವಗಳನ್ನ ಸಿವಿಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಗಾಯಾಳುವನ್ನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಧಾರವಾಡ
ಸವದತ್ತಿ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ
ಸ್ಥಳದಲ್ಲೇ ಮೂವರು ಸಾವು
ಧಾರವಾಡದ ಅಮ್ಮಿನಭಾವಿ ರಸ್ತೆಯಲ್ಲಿ ಘಟನೆ
ಕಬ್ಬು ತುಂಬಿದ್ದ ಲಾರಿ ಹಾಗೂ ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಡೆದ ಅಪಘಾತ
ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು