ಧಾರವಾಡ: ನ್ಯೂ ಇಯರ್ “ಎರಡಪಘಾತದಲ್ಲಿ” ಇಬ್ಬರ ದುರ್ಮರಣ….

ಡಿವೈಡರ್ ಗೆ ಗುದ್ದಿ ಕಾರು ಪಲ್ಟಿ; ಚಾಲಕ ಸಾವು
ನಿಂತಿದ್ದ ಕಬ್ಬಿನ ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ- ದುರ್ಮರಣ
ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ, ರಸ್ತೆಯ ಡಿವೈಡರ್ ಗೆ ಗುದ್ದಿ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿ, ಕಾರು ಚಾಲಕ ಸಾವನ್ನಪ್ಪಿದ ಘಟನೆ ಧಾರವಾಡ ಹೊಯ್ಸಳ ನಗರದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಭಾನುವಾರ ರಾತ್ರಿ ಸಮಯದಲ್ಲಿ ಹಳಿಯಾಳ ಕಡೆಯಿಂದ ಧಾರವಾಡ ಕಡೆಗೆ ಬರುತ್ತಿದ್ದ ಕಾರು ಡಿವೈಡರ್ ಗೆ ಗುದ್ದಿದ ಪರಿಣಾಮ ಅಪಘಾತ ಸಂಭವಿಸಿದ್ದು. ಧಾರವಾಡ ನಗರದ ಶೆಟ್ಟರ್ ಕಾಲೋನಿಯ ಹರೀಶ್ ಕೆಂಚರೆಡ್ಡಿ ಎಂಬುವವರೇ ಅಪಘಾತದಲ್ಲಿ ಮೃತಪಟ್ಟವರು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ದೌಡಾಯಿಸಿದ ಧಾರವಾಡ ಸಂಚಾರಿ ಪೊಲೀಸರು ಘಟನೆ ಕುರಿತು ಮಾಹಿತಿ ಕಲೆ ಹಾಕಿ ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
ಬೆಳಗಾವಿ ರಸ್ತೆಯಲ್ಲಿ ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸಾವಿಗೀಡಾಗಿದ್ದು, ಆತನ ವಿವರ ಲಭ್ಯವಾಗಿಲ್ಲ.