ಯರಿಕೊಪ್ಪದ ಬಳಿ ಅಪಘಾತ: ಮಾಜಿ ಸೈನಿಕನ ದುರ್ಮರಣ…

ಧಾರವಾಡ: ವೇಗವಾಗಿ ಬರುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಸೈನಿಕನೋರ್ವ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪದ ಬಳಿ ನಡೆದಿದೆ.

ಯರಿಕೊಪ್ಪದ ಬಳಿ ನಡೆದ ದುರ್ಘಟನೆಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಶವವನ್ನ ಮರಣೋತ್ತರ ಪರೀಕ್ಷೆಗಾಗಿ ಸಿವಿಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಲಾರಿ ಚಾಲಕ ಪರಾರಿಯಾಗಿದ್ದಾನೆ. ಘಟನೆಯ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.