ಹೆಬಸೂರ ಬಳಿ ಭೀಕರ ರಸ್ತೆ ಅಪಘಾತ- ಮಹಿಳೆ ಸಾವು, ಮೂವರ ಸ್ಥಿತಿ ಗಂಭೀರ

ಹುಬ್ಬಳ್ಳಿ: ತಾಲೂಕಿನ ಹೆಬಸೂರ ಸೇತುವೆ ಬಳಿ ಹೊಲಕ್ಕೆ ಹೋಗುತ್ತಿದ್ದ ಟ್ರ್ಯಾಕ್ಟರಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಓರ್ವ ಮಹಿಳೆ ಸಾವಿಗೀಡಾಗಿದ್ದು, ಮೂವರ ಸ್ಥಿತಿ ಗಂಭೀರವಾದ ಘಟನೆ ಸಂಭವಿಸಿದೆ.

ಹೆಬಸೂರ ಗ್ರಾಮದಿಂದ ಜಮೀನಿನಲ್ಲಿರುವ ಮೇವನ್ನ ಹೇರಿಕೊಂಡು ಬರಲು ಹೊರಟ ಸಮಯದಲ್ಲಿ ಘಟನೆ ನಡೆದಿದ್ದು, ಸ್ಥಳದಲ್ಲಿ ರೇಣವ್ವ ಭೀಮಪ್ಪ ಪಾಟೀಲ ಎಂಬ ಮಹಿಳೆ ಸಾವಿಗೀಡಾಗಿದ್ದಾಳೆ.

ಶಿಲ್ಪಾ, ಗೀತವ್ವ ಮತ್ತು ನಾರಾಯಣ ಎನ್ನುವವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸಗೆ ರವಾನೆ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ತೆರಳಿರುವ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು, ಮುಂದಿನ ಕಾನೂನು ಕ್ರಮವನ್ನು ಜರುಗಿಸಿದ್ದಾರೆ.