Posts Slider

Karnataka Voice

Latest Kannada News

ಕರ್ತವ್ಯದ ವೇಳೆ ಕಾರು ಡಿಕ್ಕಿ ಪೊಲೀಸ್ ದುರ್ಮರಣ

1 min read
Spread the love

ಶಿವಮೊಗ್ಗ: ಭಾರತೀಯ ಜನತಾ ಪಕ್ಷದ ಕಾರ್ಯಕಾರಿಣಿ ಸಭೆ ನಡೆಯುತ್ತಿರುವ ಹೊಟೇಲ್ ಎದುರು ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಪೊಲೀಸರೋರ್ವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.

ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜುಲ್ಪೀಕರ ಎಂಬುವವರೇ ಸಾವಿಗೀಡಾಗಿದ್ದು, ಬೆಂಗಳೂರು ಇಂದಿರಾನಗರದ ಸುಷ್ಮಾ ಮೈರಾಪಡಿ ಎನ್ನುವವರಿಗೆ ಸೇರಿದ ಕಾರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಭಾರತೀಯ ಜನತಾ ಪಕ್ಷದ ಕಾರ್ಯಕಾರಣಿ ಸಭೆಯಲ್ಲಿ ಹೆಚ್ಚಿನ ಬಂದೋಬಸ್ತ್ ಪರಿಣಾಮ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿದ್ದ ಜುಲ್ಪೀಕರ ಕೂಡಾ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು. ಒಂದು ಬದಿಯಿಂದ ಮತ್ತೊಂದು ಬದಿಗೆ ಹೋಗುತ್ತಿದ್ದ ಸಮಯದಲ್ಲಿ ದುರ್ಘಟನೆ ನಡೆದಿದ್ದು, ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ.

ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರನ್ನ ವಶಕ್ಕೆ ಪಡೆದು ಚಾಲಕನ ವಿಚಾರಣೆ ನಡೆಸಲಾಗುತ್ತಿದೆ.


Spread the love

Leave a Reply

Your email address will not be published. Required fields are marked *

You may have missed