ಹುಬ್ಬಳ್ಳಿ ಸಂಗೋಳ್ಳಿ ರಾಯಣ್ಣ ವೃತ್ತದಲ್ಲೇ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಸಾವು..!

ಹುಬ್ಬಳ್ಳಿ: ಮೊಬೈಲನಲ್ಲಿ ಮಾತನಾಡುತ್ತ ಹೊರಟಿದ್ದ ಬೈಕ್ ಸವಾರ ಲಾರಿಯೊಂದಕ್ಕೆ ಡಿಕ್ಕಿ ಹೊಡೆದು, ಲಾರಿಯ ಚಕ್ರದಡಿ ಹೋಗಿ ಬಿದ್ದ ಪರಿಣಾಮ, ಲಾರಿಯ ಚಕ್ರ ಹಾಯ್ದು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ನಡೆದಿದೆ.

ನೀಲಪ್ಪ ಮಾದರ ಎಂಬುವವರಿಗೆ ಸೇರಿದ ಬೈಕಿನಲ್ಲಿ ಬರುತ್ತಿದ್ದ ವ್ಯಕ್ತಿಯು, ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗಲೇ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ತಕ್ಷಣವೇ ನಿಯಂತ್ರಣ ತಪ್ಪಿ, ಲಾರಿಯ ಚಕ್ರದಡಿ ಸಿಲುಕಿದ್ದು, ಸ್ಥಳದಲ್ಲಿಯೇ ಪ್ರಾಣಬಿಟ್ಟಿದ್ದಾರೆ.
ಘಟನೆಯು ಪ್ರಮುಖ ರಸ್ತೆಯಲ್ಲಿ ನಡೆದಿದ್ದರಿಂದ ವಾಹನಗಳು ರಸ್ತೆಯುದ್ದಕ್ಕೂ ನಿಂತಿದ್ದು, ಸಂಚಾರವನ್ನ ಹತೋಟಿಗೆ ತರಲು ಸಂಚಾರಿ ಠಾಣೆಯ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ರಸ್ತೆಯಲ್ಲಿರುವ ಮೃತ ದೇಹವನ್ನ ಕಿಮ್ಸಗೆ ರವಾನೆ ಮಾಡಲಾಗಿದ್ದು, ಎರಡು ವಾಹನಗಳನ್ನ ವಶಕ್ಕೆ ಪಡೆದಿರುವ ಪೂರ್ವ ಸಂಚಾರಿ ಠಾಣೆಯ ಪೊಲೀಸರು ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.