ಧಾರವಾಡ SDM ಬಳಿ ಅಪಘಾತ: ರಾಮಕೃಷ್ಣಾಶ್ರಮದ ಸ್ವಾಮೀಜಿ ಪ್ರಾಣಾಪಾಯದಿಂದ ಪಾರು..

ಧಾರವಾಡ: ನಗರದ ಹುಬ್ಬಳ್ಳಿ ರಸ್ತೆಯಲ್ಲಿರುವ ಎಸ್ ಡಿಎಂ ವೈಧ್ಯಕೀಯ ಕಾಲೇಜು ಬಳಿಯಲ್ಲಿ ಅಪರಿಚಿತ ವಾಹನವೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಸ್ವಾಮೀಜಿಗಳು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.
ಕಲಬುರಗಿಯ ರಾಮಕೃಷ್ಣ ವಿವೇಕಾನಂದ ಆಶ್ರಮದ ಮಹೇಂದ್ರ ಸ್ವಾಮಿಜೀಗಳು ತಮ್ಮ ಶಿಷ್ಯರೊಂದಿಗೆ ಹೋಗುತ್ತಿದ್ದ ಸಮಯದಲ್ಲಿ ಎದುರಿಗೆ ಬಂದ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ಇದರಿಂದ ಕಾರಿನಲ್ಲಿದ್ದ ಸ್ವಾಮೀಜಿ ಹಾಗೂ ಶಿಷ್ಯರಿಗೆ ಯಾವುದೇ ರೀತಿಯ ಗಾಯಗಳಾಗಿಲ್ಲ. ಆದರೆ, ಸಣ್ಣಪುಟ್ಟ ಗಾಯಗಳಾಗಿವೆ.
ಘಟನೆ ನಡೆದ ತಕ್ಷಣವೇ ಗಾಬರಿಯಿಂದ ಕೆಳಗಿಳಿದು ನೋಡುವಷ್ಟರಲ್ಲೇ ಡಿಕ್ಕಿ ಹೊಡೆದಿದ್ದ ಕಾರು ಪರಾರಿಯಾಗಿದೆ. ಘಟನೆಯ ಬಗ್ಗೆ ಮಾಹಿತಿ ಸಿಗುತ್ತಿದ್ದ ಹಾಗೇ ಸ್ಥಳಕ್ಕೆ ಆಗಮಿಸಿದ ಧಾರವಾಡ ಸಂಚಾರಿ ಠಾಣೆಯ ಪೊಲೀಸರು, ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.
ಪರಾರಿಯಾಗಿರುವ ಕಾರಿನ ಬಗ್ಗೆ ರಸ್ತೆಯಲ್ಲಿರುವ ಸಿಸಿಟಿವಿ ಕ್ಯಾಮರಾಗಳನ್ನ ಪೊಲೀಸರು ಪರಿಶೀಲನೆ ಮಾಡುತ್ತಿದ್ದು, ಸುಳಿವು ದೊರೆಯುವ ಸಾಧ್ಯತೆಯಿದೆ ಎನ್ನಲಾಗಿದೆ.