Posts Slider

Karnataka Voice

Latest Kannada News

ರಸ್ತೆ ಅಪಘಾತ ಪ್ರಾಥಮಿಕ ಶಾಲಾ ಶಿಕ್ಷಕ ದುರ್ಮರಣ…!

1 min read
Spread the love

ವಿಜಯಪುರ: ಅಪರಿಚಿತ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದ ಘಟನೆಯಲ್ಲಿ ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರೋರ್ವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ವಿಜಯಪುರ ಜಿಲ್ಲೆಯ ಪಡಗಾನೂರ ಬಳಿ ನಡೆದಿದೆ.

ಶಿವಣಗಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಗುರುಲಿಂಗಯ್ಯ ರಾಚಯ್ಯ ಗುಡಿ ಎಂಬುವವರೇ ಸಾವಿಗೀಡಾಗಿದ್ದಾರೆ. ಬೈಕಿನಲ್ಲಿ ಹೋಗುತ್ತಿದ್ದ ಶಿಕ್ಷಕರಿಗೆ ಹಿಂದಿನಿಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ.

ಶಿಕ್ಷಕರಿಗೆ ತೀವ್ರ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿಯೇ ಸಾವಿಗೀಡಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡಿರುವ ವಿಜಯಪುರ ಗ್ರಾಮೀಣ ಠಾಣೆಯ ಪೊಲೀಸರು, ಪರಾರಿಯಾಗಿರುವ ವಾಹನ ಪತ್ತೆ ಹಚ್ಚಲು ಮುಂದಾಗಿದ್ದಾರೆ.


Spread the love

Leave a Reply

Your email address will not be published. Required fields are marked *