ಕೋಳಿವಾಡ ಕ್ರಾಸ್ ಬಳಿ ಭೀಕರ ಅಪಘಾತ: ಇಬ್ಬರ ದುರ್ಮರಣ..

ಹುಬ್ಬಳ್ಳಿ: ಆಟೋದಲ್ಲಿ ಹೋಗುತ್ತಿದ್ದ ಸಮಯದಲ್ಲಿ ವೇಗವಾಗಿ ಬಂದ ಬುಲೆಟ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಿಗೀಡಾದ ಘಟನೆ ಕೋಳಿವಾಡ ಕ್ರಾಸ್ ಬಳಿ ಸಂಭವಿಸಿದೆ.

ಬುಲೆಟ್ ಡಿಕ್ಕಿ ಹೊಡೆದ ರಭಸಕ್ಕೆ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಆಟೋ ಕೂಡಾ ಜಖಂಗೊಂಡಿದೆ. ಸಾವಿಗೀಡಾದವರ ಶವಗಳನ್ನ ಮರಣೋತ್ತರ ಪರೀಕ್ಷೆಗಾಗಿ ಕಿಮ್ಸಗೆ ರವಾನೆ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ತೆರಳಿರುವ ಪೊಲೀಸರು ಮಾಹಿತಿ ಸಂಗ್ರಹಿಸಿ ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.