ಹುಬ್ಬಳ್ಳಿಯಲ್ಲಿ ಅಪಘಾತ: ಎರಡು ಕಾರು, ಟೆಂಪೋ, ಲಾರಿ ಪೊಲೀಸರ ವಶಕ್ಕೆ
1 min readಹುಬ್ಬಳ್ಳಿ: ನಗರದಿಂದ ಗದಗ ರಸ್ತೆಗೆ ಹೋಗುವ ಸಮಯದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತಗಳು ಸಂಭವಿಸಿದ್ದು, ಘಟನೆಯಲ್ಲಿ ಜಖಂಗೊಂಡ ಎರಡು ಕಾರು, ಲಾರಿ ಹಾಗೂ ಟೆಂಪೋವನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕಾರು ಚಾಲಕ ಸಡನ್ನಾಗಿ ಬ್ರೇಕ್ ಹಾಕಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದು ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿ, ಕಾರು ಜಖಂಗೊಂಡ ಘಟನೆ ಹುಬ್ಬಳ್ಳಿ-ಗದಗ ರಸ್ತೆಯಲ್ಲಿಂದು ನಡೆದಿದೆ.
ಗದಗ ಮೂಲದ ಡಾ.ನಾಗಭೂಷಣ ಬಗರೇ ಎಂಬುವವರಿಗೆ ಸೇರಿದ ಕಾರು ಹುಬ್ಬಳ್ಳಿಯಿಂದ ಗದಗ ಕಡೆಗೆ ಹೊರಟ ಸಮಯದಲ್ಲಿ ಘಟನೆ ನಡೆದಿದ್ದು, ಕೆಎ-25 ಸಿ 4483 ಸಂಖ್ಯೆಯ ಲಾರಿ ಡಿಕ್ಕಿ ಹೊಡೆದಿದ್ದರಿಂದ ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಾರಿಯನ್ನ ವಶಕ್ಕೆ ಪಡೆದಿದ್ದು, ಚಾಲಕನನ್ನ ವಿಚಾರಣೆ ಮಾಡುತ್ತಿದ್ದಾರೆ.
ಟೆಂಪೋವೊಂದು ಕಾರಿನ ಹಿಂದಿನಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಕಾರು ಮರಕ್ಕೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದವರಿಗೆ ಗಾಯಗಳಾದ ಘಟನೆ ಹುಬ್ಬಳ್ಳಿಯ ಒಂಟಿ ಹನಮಪ್ಪ ದೇವಸ್ಥಾನದ ಬಳಿ ಸಂಭವಿಸಿದೆ.
ಹುಬ್ಬಳ್ಳಿಯಿಂದ ಅಣ್ಣಿಗೇರಿಗೆ ಹೊರಟಿದ್ದ ಕಾರಿಗೆ ಹಿಂದಿನಿಂದ ಬಂದ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಚಾಲಕನ ಚಾಣಾಕ್ಷನದಿಂದ ದೊಡ್ಡದೊಂದು ದುರಂತ ತಪ್ಪಿದಂತಾಗಿದೆ. ಮರಕ್ಕೆ ಡಿಕ್ಕಿ ಹೊಡೆಯದೇ ಇದ್ದರೇ, ಮುಂದಿರುವ ಗುಂಡಿಯಲ್ಲಿ ಕಾರು ಬೀಳುವ ಸಾಧ್ಯತೆಯಿತ್ತು ಎಂದು ಹೇಳಲಾಗಿದೆ.
ಎರಡು ಪ್ರಕರಣಗಳು ಹುಬ್ಬಳ್ಳಿ ಪೂರ್ವ ಸಂಚಾರಿ ಠಾಣೆಯಲ್ಲಿ ದಾಖಲಾಗಿದೆ.