ಅಗಸರು-ಕ್ಷೌರಿಕ ವೃತ್ತಿಯವರಿಗೆ 5 ಸಾವಿರ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ
ಹುಬ್ಬಳ್ಳಿ: ಕೋವಿಡ್-19 ಲಾಕ್ ಡೌನ್ ನಿಂದಾಗಿ ಆರ್ಥಿಕ ಸಂಕಷ್ಟಕ್ಕೀಡಾಗಿರುವ ಅಗಸರು ಹಾಗೂ ಕ್ಷೌರಿಕ ವೃತ್ತಿಯವರಿಗೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ 5 ಸಾವಿರ ಆರ್ಥಿಕ ನೆರವು ನೀಡಲಾಗುವುದು.
ಜೂನ್ 30ರ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. 18 ರಿಂದ 65 ವರ್ಷ ವಯೋಮಾನದೊಳಗಿನ ಬಿಪಿಎಲ್ ಕಾರ್ಡ್ ಹೊಂದಿರುವ, ಕುಟುಂಬದ ಒಬ್ಬ ಸದಸ್ಯರಿಗೆ ಆರ್ಥಿಕ ನೆರವು ನೀಡಲಾಗುವುದು. ಅಗಸ ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ವಲಸೆ ಕಾರ್ಮಿಕರು ಸಹ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಅರ್ಹರಾಗಿರುತ್ತಾರೆ. ಸೇವಾ ಸಿಂಧು https://sevasindhu.karnataka.gov.in ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಆಧಾರ್ ಸಂಖ್ಯೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ ವಿವರ ದೊಂದಿಗೆ, ಉದ್ಯೋಗ ದೃಢೀಕರಣ ಪತ್ರ, ಸ್ವಯಂ ಘೋಷಣಾ ಪತ್ರ, ಬಿ.ಪಿ.ಎಲ್ ಕಾರ್ಡ್, ಆಧಾರ್ ಕಾರ್ಡ್, ಜನ್ಮ ದಿನಾಂಕ ದಾಖಲೆ, ಪಾಸ್ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಪೂರಕ ದಾಖಲೆಯಾಗಿ ಸಲ್ಲಿಸಬೇಕು. ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಪರಿಹಾರವನ್ನು ವರ್ಗಾಯಿಸಲಾಗುವುದು ಎಂದು ಕಾರ್ಮಿಕ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.