ಕರ್ನಾಟಕಕ್ಕೆ ಒಲಿಯತ್ತಾ ಎಐಸಿಸಿ ಪಟ್ಟ: ಗಾಂಧಿ ಕುಟುಂಬದಿಂದ ಕಳಚಲಿದೇಯಾ…!
ನವದೆಹಲಿ: ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ನಾಯಕ ರಾಹುಲ್ ಗಾಂಧಿ ವಹಿಸಿಕೊಳ್ಳಲು ನಿರಾಕರಿಸುತ್ತಿದ್ದಾರೆ. ಪರಿಣಾಮ ಸೋಮವಾರ ದೆಹಲಿಯಲ್ಲಿ ಗಾಂಧಿ ಕುಟುಂಬ ಹೊರತು ಪಡಿಸಿ ಬೇರೆ ನಾಯಕರನ್ನು ಆಯ್ಕೆ ಮಾಡಲು ಸಭೆ ಸೇರುತ್ತಿದ್ದು, ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಮುಂಚೂಣಿಯಲ್ಲಿದೆ.
ಈಗಾಗಲೇ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರದಲ್ಲಿ ಎರಡು ಬಾರಿ ಸಚಿವರಾಗಿ ಕೆಲಸ ಮಾಡಿದ ಅನುಭವ ಇದೆ. ಅಲ್ಲದೆ ಲೋಕಸಭೆ ಕಾಂಗ್ರೆಸ್ ಸಂಸದಿಯ ನಾಯಕರಾಗಿ ಸಮರ್ಥವಾಗಿ ಮಾತನಾಡಿ ಬಿಜೆಪಿ ಸರ್ಕಾರದ ವಿರುದ್ದ ಟೀಕಿಸಿದ್ದಾರೆ.
ಪಕ್ಷದ ಹಿರಿಯ ನಾಯಕಿ ಸೋನಿಯ ಗಾಂಧಿ ಆಪ್ತರಲ್ಲಿ ಒಬ್ನರಾಗಿರುವ ಖರ್ಗೆ ಅವರು ಸರಾಗವಾಗಿ ಹಿಂದಿ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಮಾತನಾಡಬಲ್ಲರು. ಅಲ್ಲದೆ, ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಹೀಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ನಾಯಕರ ಗುಂಪು ಖರ್ಗೆ ಅವರ ಹೆಸರು ಪ್ರಸ್ತಾಪಿಸಲು ನಿರ್ಧರಿಸಿದ್ದಾರೆ. ಇನ್ನೊಂದೆಡೆ ಹಿರಿಯ ನಾಯಕ ಎಕೆ ಅಂಥೋನಿ ಅವರು ಹಾಗೂ ಮಹ್ಮದ ವಾಸ್ಮಿಕ ಅವರು ಆಕಾಂಕ್ಷಿಯಾಗಿದ್ದಾರೆ. ನಾಳೆ ಸಭೆ ಎಲ್ಲರಲ್ಲಿ ಕುತೂಹಲ ಕೆರಳಿಸಿದೆ.