ಬೆಟ್ಟಿಂಗ್: ಅಂದರ್-ಬಾಹರ್ ರೇಡ್: ಹುಬ್ಬಳ್ಳಿ-ಧಾರವಾಡದಲ್ಲಿ 161 ಆರೋಪಿತರ ಬಂಧನ…

ಹುಬ್ಬಳ್ಳಿ: ನರಕ ಚತುರ್ದಶಿ ದಿನದಂದು ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಮಾರ್ಗದರ್ಶನದ ಹಿನ್ನೆಲೆಯಲ್ಲಿ ಬಿಗ್ ರೇಡ್ ನಡೆದಿದ್ದು, ಸಂಪೂರ್ಣ ಮಾಹಿತಿ ಕರ್ನಾಟಕವಾಯ್ಸ್. ಕಾಂಗೆ ಲಭಿಸಿದೆ.
ಇಂಗ್ಲೆಂಡ್ ಮತ್ತು ಪಾಕಿಸ್ಥಾನ ಪಂದ್ಯದ ವೇಳೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದವರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ ಒಟ್ಟು 07 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳನ್ನು ದಾಖಲಿಸಿದ್ದು 09 ಜನ ಆರೋಪಿಗಳನ್ನು ಬಂಧಿಸಿ, 02 ಮೊಬೈಲ್ ಸೇರಿದಂತೆ ಒಟ್ಟು 29,610/- ರೂ ನಗದು ವಶಪಡಿಸಿಕೊಳ್ಳಲಾಗಿದೆ.
ಬೆಟ್ಟಿಂಗ್ ಪ್ರಕರಣಗಳ ವಿವರ…
1. ಧಾರವಾಡ ಶಹರ ಪೊಲೀಸ್ ಠಾಣೆಯ ಸಿ.ಎಮ್, ಗಾರ್ಡನ್ ಹತ್ತಿರ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದವರ ಮೇಲೆ ಸಿಸಿಬಿ ತಂಡ ದಾಳಿ ನಡೆಸಿ 11 ಪ್ರಕರಣ ದಾಖಲಿಸಿದ್ದು ಓರ್ವ ಆರೋಪಿಯನ್ನು ಬಂಧಿಸಿ 15,000/- ರೂ ನಗದು, 01 ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
2. ವಿದ್ಯಾನಗರ ಪೊಲೀಸ್ ಠಾಣೆಯ ಸಾಯಿನಗರದಲ್ಲಿ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿ ೧1 ಪ್ರಕರಣ ದಾಖಲಿಸಿದ್ದು ಓರ್ವ ಆರೋಪಿಯನ್ನು ಬಂಧಿಸಿ 2250/- ರೂ ನಗದು, ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
3. ಧಾರವಾಡ ಉಪನಗರ ಪೊಲೀಸ್ ಠಾಣೆಯ ಮಾಳಮರದಲ್ಲಿ ಹತ್ತಿರ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿ 2250/- ರೂ ನಗದು, 01 ಮೊಬೈಲ್, ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
4. ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಮೇಶಭವನದ ಹತ್ತಿರ ಹಾಗೂ ಗೋಪನಕೊಪ್ಪದಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿ 12 ಪ್ರಕರಣ ದಾಖಲಿಸಿದ್ದು ಮೂರು ಜನ ಆರೋಪಿಗಳನ್ನು ಬಂಧಿಸಿ 3100/- ನಗದು, ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
5. ಗೋಕುಲ್ ರೋಡ್ ಪೊಲೀಸ್ ಠಾಣೆಯ ಡೆನಿಸನ್ ಹೋಟೆಲ್ ಹತ್ತಿರ ಹಾಗೂ ನೆಹರು ನಗರದಲ್ಲಿ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿ 12 ಪ್ರಕರಣ ದಾಖಲಿಸಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿ 7000/- da ನಗದು ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
“ಜೂಜಾಟ : 152 ಜನರ ಮೇಲೆ ಪ್ರಕರಣ ದಾಖಲು”
ಹುಬ್ಬಳ್ಳಿ-ಧಾರವಾಡ ನಗರ ವ್ಯಾಪ್ತಿಯಲ್ಲಿ ಜೂಜಾಟ ಆಡುತ್ತಿದ್ದವರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ, ಒಟ್ಟು 28 ಪ್ರಕರಣಗಳನ್ನು ದಾಖಲಿಸಿ 152 ಜನ ಆರೋಪಿಗಳನ್ನು ಬಂಧಿಸಿ, ಒಟ್ಟು 2,89,310/- ರೂ ನಗದು ಸೇರಿದಂತೆ ಇನ್ನಿತರ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಪ್ರಕರಣಗಳ ವಿವರ…
1. ಉತ್ತರ ಉಪವಿಭಾಗದ ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ 07, ಉಪನಗರ ಪೊಲೀಸ್ ಠಾಣೆಯಲ್ಲಿ 02, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ 02, ಆಶೋಕನಗರ ಪೊಲೀಸ್ ಠಾಣೆಯಲ್ಲಿ 02, ಕಮರಿಪೇಟ್ ಪೊಲೀಸ್ ಠಾಣೆಯಲ್ಲಿ 01, ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ 01, ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ 01, ಒಟ್ಟು 16 ಜೂಜಾಟ ಪ್ರಕರಣಗಳನ್ನು ದಾಖಲಿಸಲಾಗಿದ್ದು 97 ಜನ ಆರೋಪಿಗಳನ್ನು ಬಂಧಿಸಿ 1,98,390/- ರೂ ನಗದು, ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
2. ದಕ್ಷಿಣ ಉಪವಿಭಾಗದ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ 03, ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ 01, ಒಟ್ಟು 04 ಜೂಜಾಟ ಪ್ರಕರಣಗಳನ್ನು ದಾಖಲಿಸಲಾಗಿದ್ದು 20 ಜನ ಆರೋಪಿಗಳನ್ನು ಬಂಧಿಸಿ 25,840/- ರೂ ನಗದು, ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
3. ಧಾರವಾಡ ಉಪವಿಭಾಗದ ಉಪನಗರ ಪೊಲೀಸ್ ಠಾಣೆಯಲ್ಲಿ 14, ಶಹರ ಪೊಲೀಸ್ ಠಾಣೆಯಲ್ಲಿ 03, ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ 01, ಒಟ್ಟು 08 ಜೂಜಾಟ ಪ್ರಕರಣಗಳನ್ನು ದಾಖಲಿಸಲಾಗಿದ್ದು 35 ಜನ ಆರೋಪಿಗಳನ್ನು ಬಂಧಿಸಿ 65,070/- ರೂ ನಗದು ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜೂಜಾಟ ಹಾಗೂ ಬೆಟ್ಟಿಂಗ್ ಪ್ರಕರಣ ದಾಖಲಿಸುವಲ್ಲಿ ವಿಶೇಷ ಕರ್ತವ್ಯ ನಿರ್ವಹಿಸಿದ ಅಧಿಕಾರಿ ಸಿಬ್ಬಂದಿಗಳನ್ನ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಶ್ಲಾಘಿಸಿದ್ದಾರೆ.