Posts Slider

Karnataka Voice

Latest Kannada News

ಎಪಿಎಂಸಿ ಕಾಯ್ದೆ ತಿದ್ದುಪಡಿ: ಮಾಜಿ ಸಿಎಂ ಸಿದ್ಧರಾಮಯ್ಯ ಆಕ್ರೋಶ

1 min read
Spread the love

ಬೆಂಗಳೂರು: ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತರುವ ಪ್ರಸ್ತಾವನೆಯನ್ನ ಕೈ ಬಿಡುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪರನ್ನ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿಗಳಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಸಿದ್ದರಾಮಯ್ಯ, ತಿದ್ದುಪಡಿ ತಂದರೆ ಆಗಬಹುದಾದ ತೊಂದರೆಗಳ ಬಗ್ಗೆ ವಿವರಿಸಿದರು. ಕಾಯಿದೆಗೆ ತಿದ್ದುಪಡಿ ತಂದು ಬಹುರಾಷ್ಟ್ರೀಯ ಕಂಪನಿಗಳು ಕೃಷಿ ಮಾರುಕಟ್ಟೆ ಪ್ರವೇಶ ಮಾಡಿದರೆ ಸರ್ಕಾರದ ಹಿಡಿತ ಇಲ್ಲದಂತಾಗುತ್ತದೆ. ಕೃಷಿ ಉತ್ಪನ್ನಗಳಿಗೆ ದರ ನಿಗದಿ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳಲು ಅವಕಾಶ ಇಲ್ಲದಂತಾಗತ್ತೆ. ತಿದ್ದುಪಡಿಯಿಂದ ರೈತರಿಗೆ ಆಗುವ ಅನುಕೂಲಕ್ಕಿಂತ ಅನಾನುಕೂಲವೇ ಜಾಸ್ತಿ. ಹೀಗಾಗಿ ನಿರ್ಧಾರ ಮರು ಪರಿಶೀಲಿಸಿ ಎಂದು ಸಿದ್ದರಾಮಯ್ಯ, ಮುಖ್ಯಮಂತ್ರಿಗಳಿಗೆ ಹೇಳಿದರು.


Spread the love

Leave a Reply

Your email address will not be published. Required fields are marked *

You may have missed