ಆರೋಗ್ಯ ಹಸ್ತ: ಸೆಂಟ್ರಲ್ ಕ್ಷೇತ್ರದಲ್ಲಿ ಶ್ರೀನಿವಾಸ ಮಾನೆ ಚಾಲನೆ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ 73-ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಉಣಕಲ್ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಬರುವ ವಾರ್ಡ್ ಸಂಖ್ಯೆ 27ರಲ್ಲಿ ಆರೋಗ್ಯ ಹಸ್ತ ಕಾರ್ಯಕ್ರಮದ ಅಭಿಯಾನಕ್ಕೆ ವಿಧಾನಪರಿಷತ್ ಸದಸ್ಯ ಶ್ರೀನಿವಾಸ್ ಮಾನೆ ಚಾಲನೆ ನೀಡಿದರು.
ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ್ ಉಳ್ಳಾಗಡ್ಡಿಮಠ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಉಣಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಗಣಿ ಅಧ್ಯಕ್ಷತೆ ವಹಿಸಿದ್ದರು.
ಈ ಸಮಯದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಪಕ್ಷದ ಕಾರ್ಯಕರ್ತರು ಆಸಕ್ತಿಯಿಂದ ಕಾರ್ಯನಿರ್ವಹಿಸಬೇಕು. ಜನರ ಸೇವೆ ಮಾಡುವುದು ದೇವರ ಸೇವೆ ಮಾಡುವುದು ಒಂದೇ ಎಂದರು.
ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಾಗರ್ ಹಿರೇಮನಿ, ಸ್ವಾತಿ ಮಾಳಗಿ, ಪ್ರವೀಣ್ ಶಲವಡಿ, ಸಂತೋಷ್ ಜಕ್ಕಪ್ಪನವರ್ , ರಾಜು ಗಾಣದಾಳ, ಮೊಹಮ್ಮದ್ ಶರೀಫ್, ವಾಸು ಲಮಾಣಿ, ಮಂಜು ನೀಲಗುಂದ, ಯಮನೂರ ನದಾಫ್ ಸೇರಿದಂತೆ ನೂರಾರು ಜನರು ಉಪಸ್ಥಿತರಿದ್ದರು.