ಧಾರವಾಡ: ಗುರುವಾರ ಮಧ್ಯಾಹ್ನದವರೆಗೆ ಮಧ್ಯ ಮಾರಾಟ ನಿಷೇಧ
*ಹುಬ್ಬಳ್ಳಿ ಧಾರವಾಡ*
*ಅವಳಿನಗರದಲ್ಲಿ ಮದ್ಯ ಮಾರಾಟ ನಿಷೇಧ*
*ಹಾಗೂ 144 ರ ಕಲಂ ಅಡಿ ನಿಷೇಧಾಜ್ಞೆ ಜಾರಿ*
ಹುಬ್ಬಳ್ಳಿ: ನಾಳೆ ಅಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಶಿಲಾನ್ಯಾಸ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ, ಕಾನೂನು, ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ದೃಷ್ಟಿಯಿಂದ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಸಿ ಆರ್ ಪಿ ಸಿ 1973 ಕಲಂ 144 ರನ್ವಯ ನಿಷೇಧಾಜ್ಞೆ ಹಾಗೂ ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21(2) ರನ್ವಯ ಮದ್ಯ ಮಾರಾಟ, ಸಾಗಾಣಿಕೆಯನ್ನು ಇಂದು ಅಗಸ್ಟ್ 4 ರ ಸಂಜೆ 6 ಗಂಟೆಯಿಂದ ಅಗಸ್ಟ 6 ಮಧ್ಯಾಹ್ನ 12 ಗಂಟೆಯವರೆಗೆ ನಿಷೇಧಿಸಿ ಹುಬ್ಬಳ್ಳಿ ಧಾರವಾಡ ಮಹಾನಗರದ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಹಾಗೂ ನಗರ ಪೊಲೀಸ್ ಆಯುಕ್ತ ಆರ್.ದಿಲೀಪ್ ಆದೇಶ ಹೊರಡಿಸಿದ್ದಾರೆ.