Posts Slider

Karnataka Voice

Latest Kannada News

“ನಾಳೆ” ರಾಮ ಮಂದಿರ ಉದ್ಘಾಟನೆ ಹಿನ್ನೆಲೆ- “ಈಗಿಂದ” ಧಾರವಾಡ ಜಿಲ್ಲೆಯಲ್ಲಿ “ಮದ್ಯ, ಮರಾಟ, ಸಾಗಾಟ” ಬಂದ್…

1 min read
Spread the love

ಇಂದು ಜ.21ರ ಸಂಜೆ 6 ಗಂಟೆಯಿಂದ ಜ.23 ರ ಬೆಳಿಗ್ಗೆ 9 ಗಂಟೆಯವರೆಗೆ ಜಿಲ್ಲೆಯಲ್ಲಿ ಮದ್ಯಮಾರಾಟ, ಮದ್ಯಸಾಗಾಣಿಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಧಾರವಾಡ: ನಾಳೆ, ಜನವರಿ 22 ರಂದು ಅಯೋದ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಧಾರವಾಡ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಮದ್ಯಪಾನ, ಮದ್ಯಮಾರಾಟ, ಮದ್ಯಸಾಗಾಟವನ್ನು ದಿನಾಂಕ 21-01-2024 ರ ಸಂಜೆ 06-00 ಗಂಟೆಯಿಂದ ದಿನಾಂಕ 23-01-2024ರ ಬೆಳಿಗ್ಗೆ 09-00 ಗಂಟೆ ವರೆಗೆ ಮದ್ಯಪಾನ ಮತ್ತು ಮದ್ಯ ಮಾರಾಟ, ಸಾಗಾಟ ನಿಷೇಧಿಸಿ ಧಾರವಾಡ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳಾದ ಸ್ವರೂಪ. ಟಿ. ಕೆ., ಅವರು ಇಂದು ಆದೇಶ ಹೊರಡಿಸಿದ್ದಾರೆ.

ಈ ಕುರಿತು ಆದೇಶ ನೀಡಿರುವ ಅವರು, ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21 (1) ನೇದ್ದರಲ್ಲಿ ಪ್ರದತ್ತವಾದ ಅಧಿಕಾರದ ಮೇರೆಗೆ, ದಿನಾಂಕ 21-01-2024 ರ 06-00 ಗಂಟೆಯಿಂದ 23-01-2024 ರ ಬೆಳಿಗ್ಗೆ 9 ಗಂಟೆಯ ವರೆಗೆ, ಜಿಲ್ಲೆಯ ಗ್ರಾಮೀಣ ವ್ಯಾಪ್ತಿಯಲ್ಲಿ ಮದ್ಯಪಾನ , ಮದ್ಯ ಮಾರಾಟ ಮತ್ತು ಮದ್ಯ ಸಾಗಣಿಕೆಯನ್ನು ನಿಷೇಧಿಸಿ, ಆದೇಶಿಸಿದ್ದಾರೆ.

ಆದ್ದರಿಂದ ಯಾವತ್ತೂ ಭಾರತೀಯ ತಯಾರಿಕೆ ಮದ್ಯದ ಅಂಗಡಿಗಳು, ಬೀರ ಬಾರಗಳು, ಕ್ಲಬ್‌ಗಳು ಮತ್ತು ಮದ್ಯದ ಡೀಪೋಗಳನ್ನು ಈ ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಮುಚ್ಚಿಸತಕ್ಕದ್ದು. ಇದಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ವಲಯ
ಅಬಕಾರಿ ಇನ್ಸ್ ಪೆಕ್ಟರರು ಹಾಗೂ ಉಪವಿಭಾಗ ಅಬಕಾರಿ ಅಧೀಕ್ಷಕರು, ಕರ್ನಾಟಕ ಅಬಕಾರಿ ಕಾಯ್ದೆ, 1965ರ ಕಲಂ 21(2)ರನ್ವಯ ಅವಶ್ಯಕತೆ ಕಂಡುಬಂದಲ್ಲಿ, ಶಾಂತಿ ಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಆದೇಶ ನೀಡಿದ್ದಾರೆ.

ಅಬಕಾರಿ ಉಪ ಆಯುಕ್ತರು ಧಾರವಾಡ ಮತ್ತು ಆರಕ್ಷಕ ಅಧೀಕ್ಷಕರು ಧಾರವಾಡ ಜಿಲ್ಲೆ ಹಾಗೂ ಹೆಚ್ಚುವರಿ ಅಬಕಾರಿ ಅಧೀಕ್ಷಕರು, ಧಾರವಾಡ ಜಿಲ್ಲೆ ಇವರು ತಮ್ಮ ವ್ಯಾಪ್ತಿಯಲ್ಲಿ ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಜರುಗಿಸಬೇಕೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.


Spread the love

Leave a Reply

Your email address will not be published. Required fields are marked *

You may have missed