ಹುಬ್ಬಳ್ಳಿ: ವಯಸ್ಕ ಮಹಿಳೆ ಅತ್ಯಾಚಾರ- ಕೃತ್ಯದ ವೀಡಿಯೋ ಮಾಡಿದ ಕಾಮಾಂಧ “ನರಾಧಮರು” ಅರೆಸ್ಟ್…!!!
ಹುಬ್ಬಳ್ಳಿಯಲ್ಲಿ ಭೀಭತ್ಸ ಘಟನೆ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಕೃತ್ಯದ ವಿಡಿಯೋ ವೈರಲ್ ಮಾಡಿದ ಕಾಮುಕರು
ಹುಬ್ಬಳ್ಳಿ: ನಗರದಲ್ಲಿ ಅಸಹಾಯಕ ಮಹಿಳೆಯೊಬ್ಬಳ ಮೇಲೆ ಇಬ್ಬರು ನರಾಧಮರು ಸಾಮೂಹಿಕ ಅತ್ಯಾಚಾರ ಎಸಗಿ, ಆ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ವಿಡಿಯೋ ಹರಿಬಿಟ್ಟಿರುವ ಅಮಾನವೀಯ ಘಟನೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣದ ಬೆನ್ನತ್ತಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಿವಶಂಕರ ಕಾಲೋನಿಯ ದುರುಳರ ಬಂಧನ:
ಬಂಧಿತರನ್ನು ಶಿವಶಂಕರ ಕಾಲೋನಿಯ ನಿವಾಸಿಗಳಾದ ಶಿವಾನಂದ್ (29) ಮತ್ತು ಗಣೇಶ್ ಗಿಡ್ಡಣ್ಣವರ (31) ಎಂದು ಗುರುತಿಸಲಾಗಿದೆ. ಹಾವೇರಿ ಮೂಲದ ಸಂತ್ರಸ್ತ ಮಹಿಳೆಯು ಕಳೆದ ಕೆಲವು ದಿನಗಳಿಂದ ಹುಬ್ಬಳ್ಳಿ ನಗರದ ವಿವಿಧೆಡೆ ಅಡ್ಡಾಡಿಕೊಂಡಿದ್ದರು. ಇದನ್ನು ಗಮನಿಸಿದ ಆರೋಪಿಗಳು ಮಹಿಳೆಯನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದು ಈ ಘೋರ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ವೈರಲ್ ವಿಡಿಯೋದಿಂದ ಬಯಲಾದ ಕೃತ್ಯ:
ಆರೋಪಿಗಳು ಅತ್ಯಾಚಾರ ಮಾಡುವ ಸಂದರ್ಭದಲ್ಲಿ ಅದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದರು. ನಂತರ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಯಿತು. ವಿಷಯ ತಿಳಿದ ಸ್ಥಳೀಯರು ಆರೋಪಿಗಳನ್ನು ಪತ್ತೆ ಹಚ್ಚಿ ಸ್ಥಳದಲ್ಲೇ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಪೊಲೀಸ್ ತನಿಖೆ ಚುರುಕು:
ನೊಂದ ಮಹಿಳೆಯು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದು, ಪೊಲೀಸರು ತಕ್ಷಣವೇ ಎಫ್‌ಐಆರ್ ದಾಖಲಿಸಿಕೊಂಡು ಆರೋಪಿಗಳನ್ನು ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಿದ್ದಾರೆ. ಸಂತ್ರಸ್ತ ಮಹಿಳೆಯನ್ನು ಹೆಚ್ಚಿನ ವೈದ್ಯಕೀಯ ಪರೀಕ್ಷೆ ಮತ್ತು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
”ನಗರದಲ್ಲಿ ಇಂತಹ ವಿಕೃತ ಘಟನೆಗಳು ನಡೆಯುತ್ತಿರುವುದು ಆತಂಕಕಾರಿಯಾಗಿದೆ. ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು,” ಎಂದು ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಹೇಳಿದರು.
