ಕಾಂಗ್ರೆಸ್ ಸೇರಲ್ಲ, ಬಿಜೆಪಿ ಬಿಡಲ್ಲಾ: ಸುಳ್ಳೇ ಸುಳ್ಳಿನವರ ವಿರುದ್ಧ ಕಾನೂನು ಸಮರ- ಅರವಿಂದ ಬೆಲ್ಲದ
1 min readಧಾರವಾಡ: ನಾನು ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂದು ಕೆಲವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಆದರೆ, ನಾನೆಂದೂ ಭಾರತೀಯ ಜನತಾ ಪಕ್ಷವನ್ನ ಬಿಟ್ಟು ಎಲ್ಲಿಯೂ ಹೋಗುವುದಿಲ್ಲವೆಂದು ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಶಾಸಕ ಅರವಿಂದ ಬೆಲ್ಲದ, ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯನ್ನ ಹಬ್ಬಿಸುವ ಪ್ರಯತ್ನ ನಡೆಯುತ್ತಿದೆ. ಇಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಿದ್ಧತೆ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ.