ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ: ಹುಬ್ಬಳ್ಳಿಯಲ್ಲಿ ಏನಾಗ್ತಿದೆ ಗೊತ್ತಾ…?
ಹುಬ್ಬಳ್ಳಿ: ಅಯೋಧ್ಯೆಯಲ್ಲಿ ಇಂದು ನಡೆಯುತ್ತಿರುವ ಐತಿಹಾಸಿಕ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭಗೊಳ್ಳುವ ಸಮಯದಲ್ಲಿ ವಾಣಿಜ್ಯನಗರಿಯಲ್ಲೂ ಭಕ್ತಿಯ ಪರಾಕಾಷ್ಠೆ ಹೆಚ್ವಾಗುತ್ತಿದೆ.
ಶ್ರೀರಾಮನ ಮಂದಿರ ನಿರ್ಮಾಣಕ್ಕೆ ಶಂಕು ಸ್ಥಾಪನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೂರುಸಾವಿರ ಮಠದಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆಯಾಗಿತ್ತು.
ಬಿಜೆಪಿಯ ಯುವ ಮುಖಂಡ ಮಂಜುನಾಥ ಹೆಬಸೂರ ನೇತೃತ್ವದಲ್ಲಿ ಶ್ರೀರಾಮ ಮಂದಿರ ಹೋಲಿಕೆಯ ಪ್ರಕಾರವನ್ನ ನಿರ್ಮಾಣ ಮಾಡಲಾಗಿತ್ತು. ಸ್ವತಃ ಶ್ರೀ ಮೂರುಸಾವಿರ ಮಠದ ಶ್ರೀಗಳು ಮಂದಿರಕ್ಕೆ ಪೂಜೆ ಸಲ್ಲಿಸುವ ಮೂಲಕ ಗೌರವ ಸಮರ್ಪಣೆ ಮಾಡಿದರು.
ಮಂಜುನಾಥ ಹೆಬಸೂರ ಗೆಳೆಯರ ಬಳಗ ಆಯೋಜನೆ ಮಾಡಿದ್ದ ಈ ಕಾರ್ಯಕ್ರಮ, ಪ್ರತಿಯೊಬ್ಬರ ಮನಸ್ಸಲ್ಲೂ ಅಚ್ಚಳಿಯದೇ ಉಳಿಯುವಂತಾಯಿತು.