ನಟ ದರ್ಶನ ಬೇಲ್ ಕ್ಯಾನ್ಸಲ್… ಮತ್ತೆ ಜೈಲಿಗೆ ದಾಸ…

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಿಂದ ಮಹತ್ವದ ತೀರ್ಪು ಹೊರಬಿದ್ದಿದೆ. ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡಿ ನ್ಯಾ.ಜೆ.ಬಿ ಪರ್ದಿವಾಲಾ ಹಾಗೂ ನ್ಯಾ.ಆರ್.ಮಹದೇವನ್ ಅವರ ಪೀಠ ಆದೇಶ ಹೊರಡಿಸಿದೆ. ಈ ಮೂಲಕ ನಟ ದರ್ಶನ್ ಮತ್ತೆ ಜೈಲಿಗೆ ಹೋಗುವುದು ಫಿಕ್ಸ್ ಆಗಿದೆ. ಹೈಕೋರ್ಟ್ ತೀರ್ಪಿನಲ್ಲಿ ದೋಷ ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ದರ್ಶನ್ ಮತ್ತು ಪ್ರಕರಣದ ಇತರೆ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಕಳೆದ ವರ್ಷ ಡಿ.13ರಂದು ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಲೇರಿತ್ತು. ಈ ಅರ್ಜಿಯನ್ನು ಜು.24ರಂದು ವಿಚಾರಣೆ ನಡೆಸಿದ ನ್ಯಾ। ಜೆ.ಬಿ. ಪರ್ದಿವಾಲಾ ಮತ್ತು ನ್ಯಾ। ಆರ್. ಮಹಾದೇವನ್ ಅವರ ಪೀಠ, ತೀರ್ಪು ಕಾಯ್ದಿರಿಸಿತ್ತು. ಇದೀಗ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡಿ ಆದೇಶಿಸಿದೆ.