Posts Slider

Karnataka Voice

Latest Kannada News

ಹುಬ್ಬಳ್ಳಿಯ ಎಲ್ಲ ಬ್ಯಾಂಕ ಸಿಬ್ಬಂದಿಗಳಿಗೆ ಕೊರೋನಾ ಟೆಸ್ಟ್ ಕಡ್ಡಾಯ

Spread the love

ಹುಬ್ಬಳ್ಳಿ: ಹುಬ್ಬಳ್ಳಿಯ ನಗರದ ಐ.ಸಿ.ಐ.ಸಿ.ಐ ಬ್ಯಾಂಕ್‍ನ 124 ಸಿಬ್ಬಂದಿಗೆ ತಾಲೂಕು ಆಡಳಿತ ವತಿಯಿಂದ ಇಂದು ಉಚಿತವಾಗಿ ಕೋವಿಡ್-19 RAPID ಆ್ಯಂಟಿಜನ್ ಹಾಗೂ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಮಾಡಲಾಯಿತು.

ನಗರದಲ್ಲಿನ ಎಲ್ಲಾ ಖಾಸಗಿ ಬ್ಯಾಂಕು ಹಾಗೂ ಫೈನಾಸಿಯಲ್ ಕಂಪನಿಗಳಿಗೆ ತಾಲೂಕು ಆಡಳಿತದಿಂದ ಪತ್ರ ಬರೆದು ಕಡ್ಡಾಯವಾಗಿ ಸಂಸ್ಥೆಯ ಸಿಬ್ಬಂದಿಗಳಿಗೆ ಕೋವಿಡ್-19 ಪರೀಕ್ಷೆ ಮಾಡಿಸುವಂತೆ ತಿಳಿಸಿಲಾಗಿದೆ. ನಿಗದಿಪಡಿಸಿದ ದಿನಾಂಕಗಳಂದು ಸಂಸ್ಥೆಗಳಿಗೆ ತೆರಳಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಕೋವಿಡ್ ಪತ್ತೆಯಾದ ರೋಗಿಗಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹುಬ್ಬಳ್ಳಿ ನಗರ ತಹಶೀಲ್ದಾರ ಶಶಿಧರ ಮಾಡ್ಯಾಳ ತಿಳಿಸಿದರು.

ಈ ಸಂದರ್ಭದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ ಪ್ರಕಾಶ್ ನಾಸಿ, ಐ.ಸಿ.ಐ.ಸಿ.ಐ ಬ್ಯಾಂಕ ಪ್ರಾದೇಶಿಕ ವ್ಯವಸ್ಥಾಪಕ ಶೀಧರ ಜೋಶಿ ಉಪಸ್ಥಿತರಿದ್ದರು.


Spread the love

Leave a Reply

Your email address will not be published. Required fields are marked *

You may have missed