ಕ್ವಾರಂಟೈನ್ ಮಾಡುವಲ್ಲಿ ಗೃಹ ಇಲಾಖೆ ಯಶಸ್ವಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೋವಿಡ್ ಸೋಂಕಿತರನ್ನು, ತಬ್ಲಿಗಿಗಳನ್ನು ಕ್ವಾರಂಟೈನ್ ಮಾಡಿಸುವಲ್ಲಿ ಗೃಹ ಇಲಾಖೆ ಯಶಸ್ವಿಯಾಗಿದೆ ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಪೊಲೀಸ್ ಕ್ವಾರ್ಟರ್ಸ್ಗಳ ಯೋಜನೆಗೆ ಅನುಮೋದನೆ ನೀಡಲು ಸಿಎಂಗೆ ಮನವಿ ಮಾಡಿದ್ದೇವೆ. ಚಾಲ್ತಿಯಲ್ಲಿರುವ ಹಲವು ಯೋಜನೆಗೆ ಅನುದಾನ ಕೇಳಿದ್ದೇವೆ. ಹೋಮ್ ಕ್ವಾರಂಟೈನ್ ನಲ್ಲಿ ಇಡುವಾಗ ಹೆಚ್ಚಿನ ಜವಾಬ್ದಾರಿ ಪೊಲೀಸ್ ಇಲಾಖೆಯ ಮೇಲೆ ಬಿದ್ದಿದೆ. ಹೆಚ್ಚು ಜವಾಬ್ದಾರಿ ವಹಿಸಿ ಕೆಲಸ ಮಾಡಲು ಸಿಎಂ ಸೂಚಿಸಿದ್ದಾರೆ ಎಂದರು.
ಹೋಮ್ ಗಾರ್ಡ್ ಗಳನ್ನು ಮುಂದುವರೆಸಲು ಸರ್ಕಾರ ತೀರ್ಮಾನಿಸಿದೆ. ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿ ಮೂರು ಸಾವಿರಕ್ಕೂ ಹೆಚ್ಚು ಹೋಂ ಗಾರ್ಡ್ ಗಳು. ಅಂತವರನ್ನು ಸೇವೆಯಲ್ಲಿ ಮುಂದುವರಿಸಲು ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ವಿವಿಧ ಇಲಾಖೆಗಳಿಗೆ ಅವರನ್ನು ನಿಯೋಜಿಸುವ ಕುರಿತು ತೀರ್ಮಾನ ಮಾಡಲಾಗಿದೆ ಎಂದರು.
ಜೂನ್ 8 ರಿಂದ ಅನ್ ಲಾಕ್ ವಿಚಾರ
ಅನ್ ಲಾಕ್ ಬಗ್ಗೆ ಕೇಂದ್ರ ಸರ್ಕಾರ ಮಾರ್ಗಸೂಚಿ ಪ್ರಕಟಿಸಬೇಕು. ಸದ್ಯ ಕೇಂದ್ರದ ಮಾರ್ಗಸೂಚಿಗಾಗಿ ನಾವು ಕಾಯುತ್ತಿದ್ದೇವೆ. ಮಾರ್ಗಸೂಚಿ ಪ್ರಕಟ ನಂತರ ಅನ್ ಲಾಕ್ ಕ್ರಮದ ಬಗ್ಗೆ ತೀರ್ಮಾನ ಮಾಡುತ್ತೇವೆ. ಸಭೆ ಸೇರಿ ಅನ್ ಲಾಕ್ ಗೆ ಏನೆಲ್ಲಾ ಮುಂಜಾಗ್ರತಾ ಕ್ರಮ ವಹಿಸಬೇಕು ಎಂಬುದರ ಬಗ್ಗೆ ತೀರ್ಮಾನ ಮಾಡುತ್ತೇವೆ. ಈ ಕುರಿತು ಶೀಘ್ರದಲ್ಲೇ ಕೇಂದ್ರ ದಿಂದ ಹೊಸ ಮಾರ್ಗಸೂಚಿ ಪ್ರಕಟ ಆಗಲಿದೆ ಎಂದು ಸಿಎಂ ಗೃಹ ಕಚೇರಿ ಕೃಷ್ಣಾ ಬಳಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.