FIR ಮಾಡಿ ಸುಮ್ಮನೆ ಕುಳಿತ ಪೊಲೀಸ್: ಬೆಂಡಿಗೇರಿ ಠಾಣೆ ಮುಂದೆ ಪ್ರತಿಭಟನೆ…

ಹುಬ್ಬಳ್ಳಿ: ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಸೋತಿದ್ದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಬೆಳದಡಿ ಸೇರಿದಂತೆ ಮತ್ತಿತರರು ನಡೆಸಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ ಗುಂಟ್ರಾಳ ಬೆಂಬಲಿಗರು ಬೆಂಡಿಗೇರಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಹಲ್ಲೆ ನಡೆಸಿದ ನಂತರ ಪ್ರಕರಣ ದಾಖಲು ಮಾಡಿಕೊಂಡ ಬೆಂಡಿಗೇರಿ ಠಾಣೆ ಇನ್ಸಪೆಕ್ಟರ್ ಶ್ಯಾಮರಾವ ಸಜ್ಜನ ಅವರು, ಆರೋಪಿಗಳನ್ನ ರಾಜಾರೋಷವಾಗಿ ತಿರುಗಾಡಲು ಬಿಟ್ಟಿದ್ದಾರೆಂದು ಪ್ರತಿಭಟನಾ ನಿರತರು ಆರೋಪಿಸಿದರು.
ಸ್ಥಳಕ್ಕೆ ಡಿಸಿಪಿ ಬಸರಗಿ ಬಂದಿದ್ದು, ಪ್ರತಿಭಟನೆ ಸ್ಥಗಿತಗೊಳಿಸುವಂತೆ ಮನವಿ ಮಾಡಿಕೊಂಡರು.