ಜನರ ಪ್ರಾಣದ ಜೊತೆ ಚೆಲ್ಲಾಟವಾಡಬೇಡಿ: ಮೊದಲು ಲಾಕ್ ಡೌನ್ ಮಾಡಿ-ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಗರಂ
1 min readಬೆಂಗಳೂರು: ರಾಜಧಾನಿಯಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಕೊರೋನಾ ಪಾಸಿಟಿವ್ ಪ್ರಕರಣಗಳಿಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರೋಸಿ ಹೋಗಿದ್ದು ಟ್ವೀಟ್ ಮೂಲಕ ಸರಕಾರಕ್ಕೆ ಛೀಮಾರಿ ಹಾಕಿದ್ದಾರೆ. ಟ್ವೀಟ್ ಮೂಲಕ ಅವರೇನಂದಿದ್ದಾರೆ ಇಲ್ಲಿದೆ ನೋಡಿ..
ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್ ಡೌನ್ ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ. ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ ಸಂಪೂರ್ಣ ಲಾಕ್ ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ.
ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಪರಿಹಾರ ದಕ್ಕಿಲ್ಲ.
ಬರೀ ಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು. ಅದರ ಅನುಷ್ಠಾನಕ್ಕೆ ತಕ್ಷಣ ಕಾರ್ಯೋನ್ಮುಖವಾಗಬೇಕು. ಪ್ಯಾಕೇಜ್ ಘೋಷಣೆ ಮಾಡಿ, ಸರ್ಕಾರ ಅಂಗೈಯಲ್ಲಿ ಅರಮನೆ ತೋರಿಸಬಾರದು.