ಬಿಇಓ ಬಡ್ತಿ ಕೌನ್ಸಲಿಂಗ್ ಗೆ ದಿನಾಂಕ ನಿಗದಿ: ಆದೇಶ ಹೊರಡಿಸಿದ ಇಲಾಖೆ
ಬೆಂಗಳೂರು: ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢ ಶಾಲೆಯ ಮುಖ್ಯಶಿಕ್ಷಕರ/ ತತ್ಸಮಾನ ವೃಂದದ ಅಧಿಕಾರಿಗಳನ್ನ ಕರ್ನಾಟಕ ನಾಗರಿಕ ಸೇವಾ ನಿಯಮಗಳ ಪ್ರಕಾರ ಬಡ್ತಿ ನೀಡಲು ಇಲಾಖೆ ಆದೇಶ ಹೊರಡಿಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು ಮತ್ತು ತತ್ಸಮಾನ ವೃಂದದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಲ್ಯಾಣ ಕರ್ನಾಟಕದ ಸ್ಥಳೀಯ ವೃಂದದ 23 ಅಧಿಕಾರಿಗಳು ಹಾಗೂ ಮೂಲ ವೃಂದದ 75 ಅಧಿಕಾರಿಗಳನ್ನ ಜೇಷ್ಠತೆಯ ಆದಾರದ ಮೇಲೆ ಕೌನ್ಸಲಿಂಗ್ ಮಾಡಲು ನಿರ್ಧರಿಸಲಾಗಿದೆ.
ಅಕ್ಟೋಬರ್ 1ರಿಂದ 3ನೇ ತಾರೀಖಿನಲ್ಲಿ ಬೆಂಗಳೂರಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿಯಲ್ಲಿ ಕೌನ್ಸಲಿಂಗ್ ನಡೆಸುವ ಬಗ್ಗೆ ಆಡಳಿತ ವಿಭಾಗದ ಜಂಟಿ ನಿರ್ದೇಶಕ ಸಿ.ಮಂಜುನಾಥ ಆದೇಶ ಹೊರಡಿಸಿದ್ದಾರೆ.
ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಕೌನ್ಸಲಿಂಗ್ ಸಮಯದಲ್ಲಿ ಹೊಸ ತಾಲೂಕುಗಳಿಗೆ ಇವರುಗಳನ್ನ ನೇಮಕ ಮಾಡುವ ಸಾಧ್ಯತೆ ಹೆಚ್ಚಾಗಿದೆ. ನೂತನ ತಾಲೂಕುಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕೊರತೆ ಇರುವುದನ್ನ ಶಿಕ್ಷಕರ ಸಂಘಟನೆಗಳು ಆಗಾಗ ಸರಕಾರದ ಗಮನಕ್ಕೆ ತಂದಿರುವುದನ್ನ ಇಲ್ಲಿ ಸ್ಮರಿಸಬಹುದು.