ಬಿಜೆಪಿಯಿಂದ ಕೆ.ಎಸ್.ಈಶ್ವರಪ್ಪ ಉಚ್ಚಾಟನೆ…!!!

ಬೆಂಗಳೂರು: ಭಾರತೀಯ ಜನತಾ ಪಕ್ಷದಿಂದ ಕೆ.ಎಸ್.ಈಶ್ವರಪ್ಪ ಅವರನ್ನ ಆರು ವರ್ಷಗಳವರೆಗೆ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದು, ಬಿಜೆಪಿಯಲ್ಲಿ ಶಿಸ್ತು ಆರಂಭವಾಗಿದೆ.
ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಪಡೆಯುವ ಪ್ರಯತ್ನ ಮಾಡಿದರೂ ಸಿಗದ ಹಿನ್ನೆಲೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಇಳಿದಿದ್ದಾರೆ.
ಇದರಿಂದ ಪಕ್ಷದ ಮುಜುಗರ ತಪ್ಪಿಸಲು ಶಿಸ್ತು ಸಮಿತಿ ಆದೇಶ ಹೊರಡಿಸಿದ್ದು, ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಅಧ್ಯಕ್ಷ ಲಿಂಗರಾಜ ಪಾಟೀಲ ಆದೇಶ ಹೊರಡಿಸಿದ್ದಾರೆ.