ಮಹಿಳೆಯರ ಬಗ್ಗೆ ಅವಹೇಳಕಾರಿ ಹೇಳಿಕೆ: ಬಿಜೆಪಿ ಓಬಿಸಿ ಮೋರ್ಚಾ ಉಪಾಧ್ಯಕ್ಷನ ಬಂಧನ
1 min readದಾವಣಗೆರೆ: ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆಡಿಯೋ ವೈರಲ್ ಆಗಿದ್ದು, ಈ ಸಂಬಂಧವಾಗಿ ಬಿಜೆಪಿ ಜಿಲ್ಲಾ ಘಟಕದ ಓಬಿಸಿ ಮೋರ್ಚಾ ಉಪಾಧ್ಯಕ್ಷರನ್ನ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಟೈಗರ್ ಅಂಜಿನಪ್ಪ ಅಲಿಯಾಸ್ ಸಾಗರ ಚಿಕ್ಕ ಉಜ್ಜನಿ ಅಂಜಿನಪ್ಪರ ಬಳಿಯಿದ್ದ ಮೊಬೈಲ್ ಹಾಗೂ ಆಡಿಯೋ ತುಣಕನ್ನ ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ. ಗ್ರಾಮಾಂತರ ಡಿವೈಎಸ್ಪಿ ನರಸಿಂಹ ತಾಮ್ರಧ್ವಜ ಅವರು ಮುಂದಿನ ಕ್ರಮವನ್ನ ತೆಗೆದುಕೊಂಡಿದ್ದಾರೆ.
ಅಂಜಿನಪ್ಪ ಹಲವು ಧರ್ಮದ ಮಹಿಳೆಯರ ಬಗ್ಗೆ ಅವಹೇಳಕಾರಿಯಾಗಿ ವ್ಯಕ್ತಿಯೊಬ್ಬರ ಜೊತೆ ಮಾತನಾಡಿದ್ದು, ಅದೇ ಆಡಿಯೋವನ್ನ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಈ ಬಗ್ಗೆ ಚಿಕ್ಕ ಉಜ್ಜನಿ ಗ್ರಾಮದ ದುರಗಮ್ಮ ಎಂಬ ಮಹಿಳೆ ದೂರು ನೀಡಿದ್ದು, ಪ್ರಕರಣ ದಾಖಲು ಮಾಡಿ, ಅಂಜಿನಪ್ಪನವರ ಬಂಧನ ಮಾಡಲಾಗಿದೆ.
ಪ್ರಕರಣ ವಿಕೋಪಕ್ಕೆ ಹೋದ ತಕ್ಷಣವೇ ಬಿಜೆಪಿಯ ಜಿಲ್ಲಾ ಅಧ್ಯಕ್ಷ ವಿರೇಶ ಹನಗವಾಡಿ, ಅಂಜಿನಪ್ಪ ಅವರನ್ನ ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿದ್ದಾರೆ. ಈ ಪ್ರಕರಣದ ಸಂಬಂಧ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.