ಕನ್ನಡದ ಕಂದ ಸೆಂಟ್ರಲ್ ಅಧ್ಯಕ್ಷ- ಗುರುವಿನ ಸನ್ನಿಧಾನದಲ್ಲಿ ಶಿಷ್ಯನಿಗೆ ಮೈಸೂರು ಪೇಟ್

ಹುಬ್ಬಳ್ಳಿ: ವಿಶ್ವ ಕನ್ನಡ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ರಂಗಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ಅಕ್ಕನ ಬಳಗ ಸಭಾಭವನದಲ್ಲಿ ಪ್ರಶಸ್ತಿ ಪ್ರಧಾನ ನಡೆಸಲಾಯಿತು.
ಭಾರತೀಯ ಜನತಾ ಪಕ್ಷದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸಂತೋಷ ಚವ್ಹಾಣ ಅವರಿಗೂ ವಿಶ್ವಕನ್ನಡ ಬಳಗ ರಾಜ್ಯೋತ್ಸವ ಪ್ರಶಸ್ತಿಯನ್ನ ನೀಡಿ ಗೌರವಿಸಿತು. ಸೆಂಟ್ರಲ್ ಕ್ಷೇತ್ರದ ಶಾಸಕರು ಆಗಿರುವ ಸಚಿವ ಜಗದೀಶ ಶೆಟ್ಟರ ಅವರಿಂದ ಸತ್ಕರಿಸಲಾಯಿತು.
ಸತ್ಕಾರ ಸ್ವೀಕರಿಸಿ ಮಾತನಾಡಿದ ಸಂತೋಷ ಚವ್ಹಾಣ, ಸಾರ್ವಜನಿಕರಿಗೆ ಸಹಾಯ ಮಾಡುವ ಉದ್ದೇಶದಿಂದ ಪಕ್ಷದಲ್ಲಿ ಅಂಗಳದಲ್ಲಿ ಇದ್ದೇವೆ. ಇಂತಹ ಪ್ರಶಸ್ತಿಗಳು ಬಂದಾಗ ನಮ್ಮ ಜವಾಬ್ದಾರಿಗಳು ಮತ್ತಷ್ಟು ಹೆಚ್ಚಾಗುತ್ತವೆ ಎಂದರು.
ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ, ಹುಡಾ ಅಧ್ಯಕ್ಷ ನಾಗೋಸಾ ಕಲಬುರ್ಗಿ, ಸಾಬೂನ ಮಾರ್ಜಕ ಆಡಳಿತ ಮಂಡಳಿ ನಿರ್ದೇಶಕ ಮಲ್ಲಿಕಾರ್ಜುನ ಸಾವುಕಾರ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮಾಜಿ ಅಧ್ಯಕ್ಷ ಸದಾನಂದ ಡಂಗನವರ, ಪ್ರೇಮಾ ಹೂಗಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.