ಹುಬ್ಬಳ್ಳಿಯ ಜೋಡೆತ್ತುಗಳೀಗ “ಆರೋಪಿ ನಂಬರ 10&17”- ಪೂರ್ಣ ಲಿಸ್ಟ್…!!!
1 min readಹುಬ್ಬಳ್ಳಿ: ಶಹರ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ಮಾಡಿದ್ದ ಪ್ರಕರಣವೀಗ ಸದ್ದು ಮಾಡುತ್ತಿದ್ದು, ನ್ಯಾಯಾಲಯದ ಆದೇಶ ಪಡೆದು ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.
ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣದಲ್ಲಿ 42 ಬಿಜೆಪಿ ಮುಖಂಡರ ಮೇಲೆ ಪ್ರಕರಣ ದಾಖಲಾಗಿದ್ದು, ಎ1 ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರನ್ನ ಮಾಡಲಾಗಿದೆ.
ಪ್ರಕರಣದಲ್ಲಿ ಶಾಸಕ ಅರವಿಂದ ಬೆಲ್ಲದ್, ಎಂ.ಆರ್.ಪಾಟೀಲ, ಮಹೇಶ ಟೆಂಗಿನಕಾಯಿ, ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಬಸವರಾಜ ಕುಂದಗೋಳಮಠ, ಸಂಜಯ ಕಪಟಕರ ಸೇರಿದಂತೆ ಅಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರ ಮೇಲೆ ಎಫ್ಐಆರ್ ದಾಖಲಾಗಿದೆ.