ಸಿಎಂ ಬದಲಾವಣೆ ನಡೆಯುತ್ತಿದೇಯಾ…? ಬಿಎಸ್‌ವೈ ಮುಂದುವರೆಯುತ್ತಾರೆ- ಬಿ.ಸಿ.ಪಾಟೀಲ
1 min readಕೊಪ್ಪಳ: ಬಿ.ಎಸ್.ಯಡಿಯೂರಪ್ಪ ಅವರೇ ಮುಂದಿನ ದಿನಗಳಲ್ಲಿಯೂ ಕೂಡ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದು, ಅವರ ನಾಯಕತ್ವದಲ್ಲಿ ಸರ್ಕಾರ ಹಾಗೂ ರಾಜ್ಯ ಬಿಜೆಪಿ ಸುಭದ್ರವಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರ್ಕಾರ ಸುಭದ್ರವಾಗಿದೆ. ಪೂರ್ಣ ಅವಧಿಯನ್ನು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಮುಗಿಸಲಿದೆ ಎಂದು ಸಚಿವ ಬಿ.ಸಿ.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ಪಾಟೀಲ ಈ ಹೇಳಿಕೆ ಹಲವು ಪ್ರಶ್ನೆಗಳನ್ನ ಹುಟ್ಟುಹಾಕಿದೆ. ಈ ಮಾತನ್ನ ಹೇಳಲು ಕಾರಣವೇನು. ಯಡಿಯೂರಪ್ಪ ಬದಲಾವಣೆ ಬಗ್ಗೆ ಯಾರೂ ಮಾತನಾಡುತ್ತಿದ್ದಾರೆ ಎಂಬ ಸಂಶಯ ಎದುರಾಗಿದೆ.