ಗುಂಡಿಗೆ ಕಾರು ಬಿದ್ದು ಮೂವರ ದುರ್ಮರಣ: ನಿಯಂತ್ರಣ ತಪ್ಪಿದ್ದೇ ಕಾರಣವಾಯಿತಾ..?
ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಗುಂಡಿಗೆ ಉರುಳಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರಿಗೆ ಗಂಭೀರವಾದ ಗಾಯವಾದ ಘಟನೆ ಶಿರಾ ತಾಲೂಕಿನ ಹೊನ್ನೇಹಳ್ಳಿ ಪಾರೆಸ್ಟ್ ಏರಿಯಾದಲ್ಲಿ ಸಂಭವಿಸಿದೆ.
ಎದುರಿನಿಂದ ಬಂದ ವಾಹನ ತಪ್ಪಿಸಲು ಹೋಗಿ ಕಾರು ನಿಯಂತ್ರಣ ತಪ್ಪಿದೆ. ಇದರಿಂದ ಬಸವರಾಜು ಸೇರಿದಂತೆ ಒಟ್ಟು ಮೂವರು ಸ್ಥಳದಲ್ಲೇ ಸಾವಿಗೀಡಾದ್ದಾರೆ. ಮೃತ ಇನ್ನಿಬ್ಬರ ಹೆಸರು ತಿಳಿದು ಬಂದಿಲ್ಲ. ಘಟನೆಯಲ್ಲಿ ಗಾಯಗೊಂಡವರನ್ನ ನವೀನ್, ಸಚಿನ್ ಎಂದು ಗುರುತಿಸಲಾಗಿದ್ದು, ಅವರುಗಳನ್ನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬುಕ್ಕಾಪಟ್ಟಣದ ಮರಡಿಗುಡ್ಡದಿಂದ ತಮ್ಮ ಮನೆಗೆ ವಾಪಸ್ಸಾಗುತ್ತಿದ್ದ ಸಮಯದಲ್ಲಿ ಈ ಘಟನೆ ನಡೆದಿದ್ದು, ಶಿರಾ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.